ಮನಸ್ಸಿನ ನಿಗ್ರಹದಿಂದ ಸಾಧನೆ

ಗವಿಸಿದ್ಧೇಶ್ವರ ಸ್ವಾಮೀಜಿ
ಗವಿಸಿದ್ಧೇಶ್ವರ ಸ್ವಾಮೀಜಿ
Published on
ಬೆಟಗೇರಿ: ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ. ನನ್ನದು ಎನ್ನುವುದು ಯಾವುದೂ ಇಲ್ಲ. ಮನಸ್ಸು ನಿಗ್ರಹ ಮಾಡುವವರು ಸವಾಲು ಗೆಲ್ಲುತ್ತಾರೆ ಎಂದು ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಬಸವ ಜಯಂತಿ ಹಾಗೂ ಮಹಾತಪಸ್ವಿ ಜಗದ್ಗುರು ಬೂದೀಶ್ವರ ಮಹಾಶಿವಯೋಗಿಗಳ ಶಿಲಾ ಮಂಟಪ ಲೋಕಾರ್ಪಣೆ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದರು.
ಮಂಗಲೋತ್ಸವ ಇಂದು: ಗ್ರಾಮದಲ್ಲಿ ಏ.30ರಂದು ಬೆಳಗ್ಗೆ 8 ಗಂಟೆಗೆ ಬಳಗಾನೂರಿನ ಶಿವಶಾಂತವೀರ ಶರಣರಿಂದ ಶಿವಭಜನೆ ಮೂಲಕ ಸದ್ಭಾವನಾ ಪಾದಯಾತ್ರೆ ಜರುಗಲಿದೆ. 10ಕ್ಕೆ ಸ್ಥಳಿಯ ವಿವಿಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊಪ್ಪಳ ಗವಿಸಿದ್ಧೇಶ್ವರ ಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಆಧ್ಯಾತ್ಮಿಕ ಪ್ರವಚನ ನೀಡುವರು. ಈಶ್ವರ ಬಳಿಗಾರ, ಶ್ರೀಧರ ದೇಯಣ್ಣವರ, ಬಸವರಾಜ ಪಣದಿ, ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಎಂ.ಐ.ನೀಲಣ್ಣವರ ಇತರರಿದ್ದರು.
ಗವಿಸಿದ್ಧೇಶ್ವರ ಸ್ವಾಮೀಜಿ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net