

ಕಲಬುರಗಿ: ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಜಯಸಿಂಗ್ ಅವರು ಪ್ರಥಮ ಸಲ ಶನಿವಾರ ನಗರಕ್ಕೆ ಆಗಮಿಸುತ್ತಿದ್ದು, ಭರ್ಜರಿ ಸ್ವಾಗತಿಸಲು ಕೈಪಡೆ ಹಾಗೂ ಅಭಿಮಾನಿಗಳು ತಯಾರಿ ಮಾಡಿಕೊಂಡಿದ್ದಾರೆ. ಹೈದರಾಬಾದ್ನಿಂದ ಮಧ್ಯಾಹ್ನ 1.30ಕ್ಕೆ ನಗರಕ್ಕೆ ಆಗಮಿಸಲಿದ್ದು, ನೆಹರು ಗಂಜ್ನಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಡಾ.ಎಸ್.ಎಂ.ಪಂಡಿತ ರಂಗಮಂದಿರಕ್ಕೆ ಕರೆ ತರಲಾಗುತ್ತದೆ. ಬಳಿಕ ಜಿಲ್ಲಾ ಕಾಂಗ್ರೆಸ್ನಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಪಕ್ಷದ ವರಿಷ್ಠರು, ಕೆಪಿಸಿಸಿ ಅಧ್ಯಕ್ಷರು ಸೇರಿ ಎಲ್ಲ ನಾಯಕರು ಪಾಲ್ಗೊಳ್ಳಲಿದ್ದಾರೆ.