ಫೆ.28 ರಿಂದ ದ್ವಿತೀಯ ಪಿಯುಸಿ, ಮಾ.18 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಶಿಕ್ಷಣ ಸಚಿವರಿಂದ ಅಂತಿಮ ವೇಳಾಪಟ್ಟಿ ಪ್ರಕಟ! SSLC
ಶಿಕ್ಷಣ ಸಚಿವರಿಂದ ಅಂತಿಮ ವೇಳಾಪಟ್ಟಿ ಪ್ರಕಟ! SSLC
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ
ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರಿಂದ ಇಂದು ವೇಳಾಪಟ್ಟಿ ಪ್ರಕಟ
ಫೆ.28 ರಿಂದ ದ್ವಿತೀಯ ಶುರುವಾದರೆ, ಮಾ.18 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ
ಬೆಂಗಳೂರು: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರು ದ್ವಿತೀಯ ಪಿಯುಸಿ ( 2nd PUC ) ಮತ್ತು ಎಸ್‌ಎಸ್‌ಎಲ್‌ಸಿ ( SSLC ) ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಇಂದು (ಫೆ.17) ಪ್ರಕಟಿಸಿದ್ದಾರೆ.
ಕಳೆದ ನವೆಂಬರ್ ತಿಂಗಳಲ್ಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಆದರೆ, ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸುವ ಮೂಲಕ ಸಚಿವ ಮಧು ಬಂಗಾರಪ್ಪ ಅಧಿಕೃತಗೊಳಿಸಿದ್ದಾರೆ.
* ಮಾರ್ಚ್ 2 – ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
* ಮಾರ್ಚ್ 3 – ಇಂಗ್ಲಿಷ್
* ಮಾರ್ಚ್ 4 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
* ಮಾರ್ಚ್ 5 – ಇತಿಹಾಸ
* ಮಾರ್ಚ್ 6 – ಭೌತಶಾಸ್ತ್ರ
* ಮಾರ್ಚ್ 7 – ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
* ಮಾರ್ಚ್ 9 – ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
* ಮಾರ್ಚ್ 10 – ಅರ್ಥಶಾಸ್ತ್ರ
* ಮಾರ್ಚ್ 11 – ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
* ಮಾರ್ಚ್ 12 – ಹಿಂದಿ
* ಮಾರ್ಚ್ 13 – ರಾಜ್ಯಶಾಸ್ತ್ರ
* ಮಾರ್ಚ್ 14 – ಲೆಕ್ಕಶಾಸ್ತ್ರ, ಗಣಿತ
* ಮಾರ್ಚ್ 16 – ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
* ಮಾರ್ಚ್ 17 – ಹಿಂದುಸ್ತಾನಿ ಸಂಗೀತ, ರೀಟೇಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ
ಸಚಿವ ಮಧು ಬಂಗಾರಪ್ಪ ಅವರು ಪರೀಕ್ಷೆಗಳ ಸಿದ್ಧತೆ, ನ್ಯಾಯಸಮ್ಮತವಾಗಿ ಪರೀಕ್ಷೆಗಳನ್ನು ನಡೆಸುವಿಕೆ, ವಿದ್ಯಾರ್ಥಿಗಳ ಹಿತ ಮತ್ತು ಅಕ್ರಮಗಳ ವಿರುದ್ಧ ಕಠಿಣ ಕ್ರಮಗಳ ಬಗ್ಗೆ ಈಗಾಗಲೇ ಹಲವು ಬಾರಿ ಎಚ್ಚರಿಸಿದ್ದಾರೆ. ಯಾವ ಬದಲಾವಣೆಯೂ ಇಲ್ಲದೇ ಈ ವೇಳಾಪಟ್ಟಿಯೇ ಅಂತಿಮವಾಗಿದೆ. ಸಂಪೂರ್ಣ ವಿಷಯಾಧಾರಿತ ವೇಳಾಪಟ್ಟಿ ಮತ್ತು PDF ಡೌನ್‌ಲೋಡ್ ಮಾಡಲು ಅಧಿಕೃತ ವೆಬ್‌ಸೈಟ್ https://kseab.karnataka.gov.inಗೆ ಭೇಟಿ ನೀಡಿಬಹುದು.