ಸಿಎಂ ಡಿಕೆಶಿ ಬೆನ್ನಲ್ಲೇ ದೆಹಲಿ ಹಾರಿದ ಸಚಿವ ನಾಗೇಂದ್ರ: ಶ್ರೀರಾಮುಲು, ಜನಾರ್ಧನ ರೆಡ್ಡಿ ವಿರುದ್ಧ ಬಿಗ್ ಪ್ಲಾನ್! | B Nagendra

B Nagendra > ದೆಹಲಿ ಹಾರಿದ ಸಚಿವ ನಾಗೇಂದ್ರ: ಶ್ರೀರಾಮುಲು, ಜನಾರ್ಧನ ರೆಡ್ಡಿ ವಿರುದ್ಧ ಬಿಗ್ ಪ್ಲಾನ್!
B Nagendra > ದೆಹಲಿ ಹಾರಿದ ಸಚಿವ ನಾಗೇಂದ್ರ: ಶ್ರೀರಾಮುಲು, ಜನಾರ್ಧನ ರೆಡ್ಡಿ ವಿರುದ್ಧ ಬಿಗ್ ಪ್ಲಾನ್!
Published on

ದೆಹಲಿ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ದೆಹಲಿಗೆ ತೆರಳಿದ ಬೆನ್ನಲ್ಲೇ ಸಚಿವ ನಾಗೇಂದ್ರ (

B Nagendra)

ಅವರೂ ಕೂಡ ದೆಹಲಿ ಪ್ರಯಾಣ ಬೆಳೆಸಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ.

ತಮ್ಮೊಂದಿಗೆ ಕೆಲವು ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ಪ್ರಯಾಣ ಬೆಳೆಸಿರುವ ನಾಗೇಂದ್ರ ಅವರು, ಮಾಜಿ ಸಚಿವರಾದ ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ಅವರ ವಿರುದ್ಧದ ದಾಖಲೆಗಳನ್ನು ವರಿಷ್ಠರ ಮುಂದೆ ಇಡಲಿದ್ದಾರೆ ಎನ್ನಲಾಗಿದೆ. ಈ ಭೇಟಿಯ ವೇಳೆ ತಮ್ಮ ಮೇಲಿನ ಕಳಂಕದ ಬಗ್ಗೆ ಸ್ಪಷ್ಟ ವಿವರಣೆ ನೀಡಲಿರುವ ನಾಗೇಂದ್ರ, ಜೊತೆಗೆ ಶ್ರೀರಾಮುಲು ಹಾಗೂ ರೆಡ್ಡಿ ವಿರುದ್ಧ ಹೋರಾಟ ರೂಪಿಸದ ಬಗ್ಗೆಯೂ ಪ್ರಸ್ತಾಪಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ವಿರುದ್ಧ ಹೋರಾಟ..?

ಹೈಕಮಾಂಡ್ ಅನುಮತಿ ಕೊಟ್ಟರೆ ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ವಿರುದ್ಧ ದೊಡ್ಡ ಮಟ್ಟದ ಹೋರಾಟ ರೂಪಿಸುವ ಬಗ್ಗೆಯೂ ನಾಗೇಂದ್ರ ಅವರು ಚರ್ಚಿಸಲಿದ್ದಾರೆ. ಅಲ್ಲದೆ, ಪ್ರತಿಪಕ್ಷಗಳು ನಡೆಸುತ್ತಿರುವ ಪಾದಯಾತ್ರೆಗೆ ವಿರುದ್ಧವಾಗಿ ಪ್ರತಿತಂತ್ರವಾಗಿ ಹೋರಾಟ ರೂಪಿಸುವ ಪ್ರಸ್ತಾಪವನ್ನು ಅವರು ವರಿಷ್ಠರ ಮುಂದಿಡಲಿದ್ದಾರೆ. ಈ ಮೂಲಕ ಶ್ರೀರಾಮುಲು ಮತ್ತು ರೆಡ್ಡಿ ವಿರುದ್ಧ ಜನಸಾಮಾನ್ಯರಿಗೆ ಸ್ಪಷ್ಟ ಸಂದೇಶ ರವಾನಿಸುವ ಮಾತುಗಳನ್ನಾಡಲಿದ್ದಾರೆ ಎಂದು ತಿಳಿದುಬಂದಿದೆ.
ಒಂದು ವೇಳೆ ತಮ್ಮ ವಿರುದ್ಧದ ಆರೋಪದಿಂದ ಪಕ್ಷಕ್ಕೆ ಮುಜುಗರ ಆಗಲಿದೆ ಎನ್ನುವುದಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ನಾಗೇಂದ್ರ ನಿರ್ಧರಿಸಿದ್ದು, ಹೈಕಮಾಂಡ್ ನಾಯಕರ ಮುಂದೆ ತಾವಾಗಿಯೇ ರಾಜೀನಾಮೆ ನೀಡುವುದಾಗಿ ತಿಳಿಸಲು ಸಜ್ಜಾಗಿದ್ದಾರೆ.

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು!

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣಕಾಸು ಅಕ್ರಮ ಪ್ರಕರಣ ಖಂಡಿಸಿ ಹಾಗೂ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ರಾಯಚೂರಿನಿಂದ ಬಳ್ಳಾರಿಯವರೆಗೆ ಬೃಹತ್ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಬಿ ವೈ ವಿಜಯೇಂದ್ರ, ಸೆಪ್ಟೆಂಬರ್ 1 ರಂದು ರಾಯಚೂರಿನಿಂದ ಅಧಿಕೃತವಾಗಿ ಚಾಲನೆಗೊಳ್ಳಲಿರುವ ಈ ಪಾದಯಾತ್ರೆಯು ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಕ್ಷೇತ್ರಗಳಲ್ಲಿ ಸಂಚರಿಸಿ, ಸೆಪ್ಟೆಂಬರ್ 10 ರಂದು ಬಳ್ಳಾರಿಯಲ್ಲಿ ನಡೆಯಲಿರುವ ಬೃಹತ್ ಬಹಿರಂಗ ಸಮಾವೇಶದೊಂದಿಗೆ ಮುಕ್ತಾಯಗೊಳ್ಳಲಿದೆ. ಒಟ್ಟು 190 ಕಿಲೋಮೀಟರ್‌ಗಳಷ್ಟು ಸುದೀರ್ಘ ಅಂತರವನ್ನು ನಾಯಕರು ಹಾಗೂ ಕಾರ್ಯಕರ್ತರು ಕಾಲ್ನಡಿಗೆಯ ಮೂಲಕ ಕ್ರಮಿಸಲಿದ್ದಾರೆ.
ಈ ಬೃಹತ್ ಹೋರಾಟಕ್ಕೆ ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷವಾದ ಜೆಡಿಎಸ್ ಸಂಪೂರ್ಣ ಬೆಂಬಲ ನೀಡಿದೆ. ಬಿಜೆಪಿ ನೇತೃತ್ವದಲ್ಲೇ ಪಾದಯಾತ್ರೆ ಸಂಘಟಿತವಾಗುತ್ತಿದ್ದರೂ, ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಆ ಮೂಲಕ ಮೈತ್ರಿಕೂಟವು ರಾಜ್ಯ ಸರ್ಕಾರದ ವಿರುದ್ಧ ಒಗ್ಗೂಡಿ ಹೋರಾಡಲು ಮುಂದಾಗಿದೆ. ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ಪ್ರಮುಖ ಪ್ರದೇಶಗಳ ಮೂಲಕ ಸಾಗಲಿರುವ ಈ ಪಾದಯಾತ್ರೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಹಿರಿಯ ನಾಯಕರು, ಶಾಸಕರು, ಸಂಸದರು ಹಾಗೂ ಲಕ್ಷಾಂತರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net