ಹೈಕೋರ್ಟ್‌ನ ಈ ಹೇಳಿಕೆಯ ಬೆನ್ನಲ್ಲೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೈಸ್ ರಸ್ತೆಯಲ್ಲಿ ಅಕ್ರಮವಾಗಿ ಟೋಲ್ ವಸೂಲಿ ಮಾಡಲಾಗುತ್ತಿದೆ. ನಿಯಮಗಳನ್ನು ಗಾಳಿಗೆ ತೂರಿ ದರ ಹೆಚ್ಚಿಸಲಾಗಿದೆ. ಸಾರ್ವಜನಿಕರು ನೈಸ್ ರಸ್ತೆಯಲ್ಲಿ ಪ್ರಯಾಣ ಮಾಡುವುದಾದರೆ, ಯಾವುದೇ ಕಾರಣಕ್ಕೂ ಟೋಲ್ ಕಟ್ಟಬೇಡಿ ಎಂದು ಕರೆ ನೀಡಿದರು. ಅಲ್ಲದೆ, ಸರ್ಕಾರವೇ ಈ ಯೋಜನೆಯನ್ನು ತನ್ನ ಸುಪರ್ದಿಗೆ ಪಡೆಯಬೇಕೆಂದು ಒತ್ತಾಯಿಸಿದ್ದಾರೆ.