ಸೋಮವಾರ ವಿಧಾನಸೌಧದಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ರಹೀಮ್ ಖಾನ್ ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ವಿಮಾನಯಾನ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ವಿಮಾನ ಸೇವೆಗಳನ್ನು ಪ್ರಾರಂಭಿಸುವಂತೆ ಒತ್ತಾಯಿಸಿದರು.