ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯನ್ನು ಮಾಜಿ ಸಚಿವ ಮಧು ಬಂಗಾರಪ್ಪ, ಬಂಗಾರಪೇಟೆ ನಾರಾಯಣಸ್ವಾಮಿ, ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ, ಪ್ರಕಾಶ್ ಕೋಳಿವಾಡ ಭೇಟಿ ಮಾಡಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಶಾಸಕ ಶರತ್ ಬಚ್ಚೇಗೌಡ, ಬಿ.ಬಿ. ಚಿಮ್ಮನಕಟ್ಟಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸಹ ಭೇಟಿ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯನ್ನು ಮತ್ತೊಂದು ಶಾಸಕರ ಗುಂಪು ಭೇಟಿ ಮಾಡಿ ಸಚಿವ ಸ್ಥಾನಕ್ಕಾಗಿ ಹಕ್ಕೊತ್ತಾಯ ಮಾಡಿದೆ. ವಿಧಾನಸಭೆಯಲ್ಲಿ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ, ಶೃಂಗೇರಿ ಶಾಸಕ ರಾಜೇಗೌಡ, ಶಾಸಕ ಶಿವಲಿಂಗೇಗೌಡ ಭೇಟಿ ಮಾಡಿ ಲಾಬಿ ನಡೆಸಿದ್ದಾರೆ.