ಅಂಗವಿಕಲ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ದೂರಿನ ಆಧಾರದಲ್ಲಿ ಅಪಾರ್ಟ್ಮೆಂಟ್ ಒಂದರ ನಿವಾಸಿಗಳಿಗೆ ರಾಜ್ಯ ಅಂಗವಿಕಲರ ಹಕ್ಕುಗಳ ಆಯುಕ್ತರು ನೀಡಿದ್ದ ಎಚ್ಚರಿಕೆ ನೋಟಿಸ್ ಅನ್ನು ರದ್ದುಪಡಿಸುವಾಗ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ. ಭವಿಷ್ಯದಲ್ಲಿ ಇಂತಹ ದೂರುಗಳನ್ನು ಪರಿಶೀಲಿಸುವಾಗ ಆಯುಕ್ತರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದೆ.