ತಾಲೂಕು ಆಸ್ಪತ್ರೆಗೆ ಶಾಸಕ ಎಚ್.ಡಿ.ರೇವಣ್ಣ ಭೇಟಿ

ಹೊಳೆನರಸೀಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಎಚ್.ಡಿ.ರೇವಣ್ಣ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಹೊಳೆನರಸೀಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಎಚ್.ಡಿ.ರೇವಣ್ಣ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
Published on
ಹೊಳೆನರಸೀಪುರ: ತಾಲೂಕು ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ 23 ಹೊರಗುತ್ತಿಗೆ ನೌಕರರನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮಂಗಳವಾರದಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ವಜಾಗೊಂಡಿರುವ ನೌಕರರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳುವವರೆಗೂ ಧರಣಿ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ವಿಷಯ ತಿಳಿದು ಶಾಸಕ ಎಚ್.ಡಿ.ರೇವಣ್ಣ ಅವರು ಬುಧವಾರ ಆಸ್ಪತ್ರೆಗೆ ಭೇಟಿ ನೀಡಿ, ಆಡಳಿತ ವೈದ್ಯಾಧಿಕಾರಿ ಡಾ. ಕೆ.ಎಲ್.ಮಂಜುಳಾ ಹಾಗೂ ಸುರಕ್ಷಾ ಏಜೆನ್ಸಿಯ ಸುರೇಶ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೌಕರರ ನೇಮಕಾತಿ ಮತ್ತು ವೇತನಕ್ಕೆ ಸಂಬಂಧಿಸಿದ ಗೊಂದಲಗಳನ್ನು ನಿವಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಆಸ್ಪತ್ರೆಯ ಸಿಬ್ಬಂದಿ ವರ್ಗಾವಣೆಯಲ್ಲಿ ಮತ್ತು ಹೊಸ ನೇಮಕಾತಿಯಲ್ಲಿ ಪಾರದರ್ಶಕವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು.ಆಸ್ಪತ್ರೆಯಲ್ಲಿ ರೋಗಿಗಳಿಗೆ ಲಭ್ಯವಿರುವ ಸೌಲಭ್ಯಗಳು, ಸ್ವಚ್ಛತೆ ಮತ್ತು ಮೂಲ ಅವಶ್ಯಕತೆಗಳ ಬಗ್ಗೆ ಚರ್ಚಿಸಿದರು.ಯಾವುದೇ ನೌಕರರನ್ನು ಏಕಾಏಕಿ ಕೆಲಸದಿಂದ ತೆಗೆಯದಂತೆ ಮತ್ತು ನಿಯಮಗಳ ಪ್ರಕಾರ ನೇಮಕಾತಿ ಪ್ರಕ್ರಿಯೆಯನ್ನು ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಂತರ ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾಕಾರರೊಂದಿಗೆ ಕೆಲಹೊತ್ತು ಮಾತನಾಡಿ ಸ್ಥಳದಿಂದ ತೆರಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net