ವೇದಿಕೆ ಸಿದ್ಧತೆ ಪರಿಶೀಲಿಸಿದ ಶಾಸಕ ಕೆ.ಎಂ. ಉದಯ್

ಮದ್ದೂರಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ಮದ್ದೂರು ನಗರದ ತಾಲೂಕು ಕ್ರೀಡಾಂಗಣದಲ್ಲಿ ಮೇ. 6 ರಂದು ನಡೆಯಲಿರುವ ರಸಸಂಜೆ ಕಾರ್ಯಕ್ರಮದ ವೇದಿಕೆ ಸಿದ್ಧತೆಯನ್ನು ಶಾಸಕ ಕೆ.ಎಂ.ಉದಯ್ ಪರಿಶೀಲನೆ ನಡೆಸಿದರು. ಚಲುವರಾಜು, ರಾಜೀವ್, ಹರೀಶ್ ಬಾಬು ಇತರರಿದ್ದರು.
ಮದ್ದೂರಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ಮದ್ದೂರು ನಗರದ ತಾಲೂಕು ಕ್ರೀಡಾಂಗಣದಲ್ಲಿ ಮೇ. 6 ರಂದು ನಡೆಯಲಿರುವ ರಸಸಂಜೆ ಕಾರ್ಯಕ್ರಮದ ವೇದಿಕೆ ಸಿದ್ಧತೆಯನ್ನು ಶಾಸಕ ಕೆ.ಎಂ.ಉದಯ್ ಪರಿಶೀಲನೆ ನಡೆಸಿದರು. ಚಲುವರಾಜು, ರಾಜೀವ್, ಹರೀಶ್ ಬಾಬು ಇತರರಿದ್ದರು.
Published on
ಮದ್ದೂರು: ಮದ್ದೂರಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ಮೇ 6 ರಂದು ನಡೆಯಲಿರುವ ರಸಸಂಜೆ ಕಾರ್ಯಕ್ರಮದ ವೇದಿಕೆ ಸಿದ್ಧತೆಯನ್ನು ಶಾಸಕ ಕೆ.ಎಂ.ಉದಯ್ ಮಂಗಳವಾರ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ನಮ್ಮ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ‘ಮದ್ದೂರು ಉತ್ಸವ’ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ರಸಸಂಜೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಖ್ಯಾತ ಚಿತ್ರ ನಟರಾದ ವಿ. ರವಿಚಂದ್ರನ್, ಧ್ರುವಸರ್ಜಾ, ರಚಿತಾ ರಾಮ್, ಪ್ರೇಮ್, ರಕ್ಷಿತಾ, ಸಾಧುಕೋಕಿಲಾ, ಗಿಲ್ಲಿ ನಟ ಸೇರಿದಂತೆ ಹಲವು ನಟ ನಟಿಯರು, ಖ್ಯಾತ ನಿರೂಪಕಿ ಅನುಶ್ರೀ ಹಾಗೂ ಗಾಯಕರು ಆಗಮಿಸಲಿದ್ದಾರೆ ಎಂದರು.
ಅಲ್ಲದೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಶಾಸಕರು ಆಗಮಿಸಲಿದ್ದಾರೆ. ಸುಮಾರು 15 ಸಾವಿರಕ್ಕೂ ಅಧಿಕ ಮಂದಿ ಆಗಮಿಸಲಿದ್ದು, ರಸಸಂಜೆ ಕಾರ್ಯಕ್ರಮದ ವೇದಿಕೆಯಲ್ಲಿ ಹಲವು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಮಾತನಾಡಿ, ಬುಧವಾರ ನಡೆಯಲಿರುವ ಮದ್ದೂರು ಉತ್ಸವದ ರಸಸಂಜೆ ಕಾರ್ಯಕ್ರಮಕ್ಕೆ ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣ, ಸರ್ಕಾರಿ ಮಹಿಳಾ ಕಾಲೇಜು ಸೇರಿದಂತೆ ಪೊಲೀಸ್ ವಸತಿಗೃಹದ ಬಳಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ಮನ್‌ಮುಲ್ ನಿರ್ದೇಶಕ ಹರೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಡಿವೈಎಸ್‌ಪಿ ಯಶವಂತ್, ಸಿಪಿಐಗಳಾದ ನವೀನ್ ಕುಮಾರ್, ನಾರಾಯಣ್, ಮುಖಂಡರಾದ ರವೀಶ್, ಯುತೀಶ್, ಪಂಚೆ ಶರತ್, ಸಂತೋಷ್, ಪ್ರಕಾಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net