ಮಲೆ ಮಹದೇಶ್ವರ ಬೆಟ್ಟಕ್ಕೆ ಶಾಸಕ ಮಂಜುನಾಥ್ ಭೇಟಿ

ಮಲೆಮಹದೇಶ್ವರ ಬೆಟ್ಟಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಅವರು ಭೇಟಿ ನೀಡಿ ಮಹಾಶಿವರಾತ್ರಿ ಜಾತ್ರೆಗೆ ಕೈಗೊಂಡಿರುವ ಸಿದ್ಧತೆ ಪರಿಶೀಲಿಸಿದರು. ಎ.ಈ ರಘು, ಚಂದ್ರಶೇಖರ್, ಚಿನ್ನಣ್ಣ ಮತ್ತಿತರರಿದ್ದರು.
ಮಲೆಮಹದೇಶ್ವರ ಬೆಟ್ಟಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಅವರು ಭೇಟಿ ನೀಡಿ ಮಹಾಶಿವರಾತ್ರಿ ಜಾತ್ರೆಗೆ ಕೈಗೊಂಡಿರುವ ಸಿದ್ಧತೆ ಪರಿಶೀಲಿಸಿದರು. ಎ.ಈ ರಘು, ಚಂದ್ರಶೇಖರ್, ಚಿನ್ನಣ್ಣ ಮತ್ತಿತರರಿದ್ದರು.
Published on
ಹನೂರು: ಮಲೆಮಹದೇಶ್ವರ ಬೆಟ್ಟಕ್ಕೆ ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಹೆಚ್ಚಿನ ಭಕ್ತರು ಆಗಮಿಸುವುದರಿಂದ ಮೂಲಸೌಕರ್ಯ ಕೊರತೆಯಾಗದಂತೆ ಅಗತ್ಯ ಮುಂಜಾಗ್ರತೆ ವಹಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
ಮ.ಬೆಟ್ಟಕ್ಕೆ ಶುಕ್ರವಾರ ಭೇಟಿ ನೀಡಿದ ಶಾಸಕರು ದಾಸೋಹ ಭವನ, ಭಕ್ತರು ಸರತಿ ಸಾಲು, ಶೌಚಗೃಹ, ಕುಡಿಯುವ ನೀರು, ನೆರಳಿನ ವ್ಯವಸ್ಥೆ ಇತರ ಸ್ಥಳಗಳಿಗೆ ತೆರಳಿ ಮಹಾ ಶಿವರಾತ್ರಿ ಜಾತ್ರೆಗೆ ಕೈಗೊಂಡಿರುವ ಸಿದ್ಧತೆ ಪರಿಶೀಲಿಸಿ ಮಾತನಾಡಿದರು.
ಮಹಾ ಶಿವರಾತ್ರಿಗೆ ಮ.ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದಾರೆ. ಕೈಗೊಂಡಿರುವ ಸಿದ್ಧತೆ ಸಮರ್ಪಕವಾಗಿ ನಿರ್ವಹಣೆಯಾಗಬೇಕು. ಭಕ್ತರಿಗೆ ಯಾವುದೇ ರೀತಿಯಲ್ಲೂ ಮೂಲ ಸೌಕರ್ಯ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಆಯಾಕಟ್ಟಿನ ಸ್ಥಳಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಬೇಕು. ದೇವರ ದರ್ಶನದಲ್ಲಿ ನೂಕುನುಗ್ಗಲು ಉಂಟಾಗದಂತೆ ಅಗತ್ಯ ಕ್ರಮವಹಿಸಬೇಕು. ಶೌಚಗೃಹಗಳು ಆಗಾಗ್ಗೆ ಸ್ವಚ್ಛಗೊಳ್ಳಬೇಕು. ಹಾಗೆಯೇ ಮಾಸ್ಟರ್ ಪ್ಲಾೃನ್ ಆವರಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸೂಚಿಸಿದರು.
ಈ ವೇಳೆ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಅಗತ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು. ದಾಸೋಹ ಭವನಕ್ಕೆ ಆಗಮಿಸಿದ ಶಾಸಕರು ನಿರಂತರ ದಾಸೋಹದ ಸಿದ್ಧತೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ದಾಸೋಹದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಭಕ್ತರಿಗೆ ವಿತರಿಸುವ ಪ್ರಸಾದ ರುಚಿಯಿಂದ ಕೂಡಿರಬೇಕು ಎಂದು ತಿಳಿಸಿದರು. ಬಳಿಕ ಪ್ರಸಾದವನ್ನು ಸವಿದು ಗುಣಮಟ್ಟವನ್ನು ಪರೀಕ್ಷಿಸಿದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಪಿಡಬ್ಲ್ಯುಡಿ ಎಇಇ ಚಿನ್ನಣ್ಣ ಹಾಗೂ ಇನ್ನಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net