ಜೆಸ್ಕಾಂ ಅಧಿಕಾರಿಗಳ ವಿರುದ್ಧ ಶಾಸಕ ಗರಂ

ಲಿಂಗಸುಗೂರು ತಾಪಂ ಸಭಾಂಗಣದಲ್ಲಿ ಹಮ್ಮಿಕೊಂಡ ವಿದ್ಯುತ್ ಕುಂದು ಕೊರತೆ ಸಭೆಯಲ್ಲಿ ಶಾಸಕ ಮಾನಪ್ಪ ವಜ್ಜಲ, ಎಸ್.ಇ. ವೆಂಕಟೇಶ, ತಾಪಂ ಇಒ ಉಮೇಶ ಇತರರಿದ್ದರು.
ಲಿಂಗಸುಗೂರು ತಾಪಂ ಸಭಾಂಗಣದಲ್ಲಿ ಹಮ್ಮಿಕೊಂಡ ವಿದ್ಯುತ್ ಕುಂದು ಕೊರತೆ ಸಭೆಯಲ್ಲಿ ಶಾಸಕ ಮಾನಪ್ಪ ವಜ್ಜಲ, ಎಸ್.ಇ. ವೆಂಕಟೇಶ, ತಾಪಂ ಇಒ ಉಮೇಶ ಇತರರಿದ್ದರು.
Published on
ಲಿಂಗಸುಗೂರು: ಪ್ರತಿನಿತ್ಯ ವಿದ್ಯುತ್ ಕಡಿತ ಮಾಡಲಾಗುತ್ತಿದ್ದು, ಅಗತ್ಯ ವೋಲ್ಟೇಜ್ ಇರುವುದಿಲ್ಲ. ಗ್ರಾಹಕರ ದೂರವಾಣಿ ಕರೆಗಳಿಗೆ  ಜೆಸ್ಕಾಂ ಸಿಬ್ಬಂದಿ ಸ್ಪಂದಿಸುತ್ತಿಲ್ಲ. ಇದೇ ರೀತಿ ಮುಂದುವರಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶಾಸಕ ಮಾನಪ್ಪ ವಜ್ಜಲ ಜೆಸ್ಕಾಂ ಅಧಿಕಾರಿಗಳ ವಿರುದ್ಧ  ಆಕ್ರೋಶ ಹೊರಹಾಕಿದರು. 
ಇಲ್ಲಿನ ತಾಪಂ ಸಭಾಂಗಣದಲ್ಲಿ  ಬುಧವಾರ ಹಮ್ಮಿಕೊಂಡ ವಿದ್ಯುತ್ ಗ್ರಾಹಕರ ಕುಂದು ಕೊರತೆ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿಯೇ ವಿದ್ಯುತ್ ಉತ್ಪಾದನೆ ಮಾಡಿ ರಾಜ್ಯಕ್ಕೆ ಪೂರೈಕೆ ಮಾಡಲಾಗುತ್ತಿದೆ. ಆದರೆ ಲಿಂಗಸುಗೂರು ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ಎದುರಿಸಬೇಕಾಗಿದೆ. ಎಷ್ಟು ಟಿಸಿಗಳನ್ನು ಖರೀದಿಸಲಾಗಿದೆ? ಎಲ್ಲೆಲ್ಲಿ ಅಳವಡಿಸಲಾಗಿದೆ ಎಂಬುದರ ಕುರಿತು ವಿವರ ಸಲ್ಲಿಸಬೇಕು. ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. 
ಕಾರ್ಯನಿರ್ವಾಹಕ ಅಭಿಯಂತರ ವಿಷ್ಣು ಮಾತನಾಡಿ, ಗುರುಗುಂಟ, ಹಟ್ಟಿ, ಆಮದಿಹಾಳ ಭಾಗದಲ್ಲಿ ರೈತರ ಪಂಪ್‌ಸೆಟ್‌ಗಳು ಜಾಸ್ತಿ ಇರುವ ಕಾರಣ ಸಮಸ್ಯೆಯಿದೆ. 
ಗೆಜ್ಜಲಗಟ್ಟದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕೆಲಸ ಪ್ರಾರಂಭವಾಗಲಿದೆ. ಲಿಂಗಸುಗೂರು ಪಟ್ಟಣದಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು. ಗುಡುಗು, ಸಿಡಿಲಿಗೆ ಟಿಸಿಗಳು ಸುಟ್ಟಿದ್ದು, ಹಂತ ಹಂತವಾಗಿ ಸರಿಪಡಿಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.   
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net