ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ಮತಗಳಲ್ಲಿ ಕೆಲವು ಕ್ರಾಸ್ ವೋಟಿಂಗ್ ನಡೆದಿರುವ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದರು. ಯಾವ ಶಾಸಕರು ಪಕ್ಷದ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ ಎಂಬುದು ಶೀಘ್ರದಲ್ಲೇ ಗೊತ್ತಾಗಲಿದ್ದು, ಈ ಬಗ್ಗೆ ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.