ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಎಂ.ಎನ್. ಅನುಚೇತ್ ಅಧಿಕಾರ ಸ್ವೀಕಾರ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್. ಅನುಚೇತ್(M.N. Anuchet )ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್. ಅನುಚೇತ್(M.N. Anuchet )ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
Published on
ಬೆಂಗಳೂರು:ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್. ಅನುಚೇತ್(M.N. Anuchet )ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಇಲಾಖೆಯ ಆಯುಕ್ತರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಎಡಿಜಿಪಿ ಹೇಮಂತ್ ಎಂ.ನಿಂಬಾಳ್ಕರ್ ಅವರು ಅಧಿಕಾರ ಹಸ್ತಾಂತರಿಸಿದರು.
ಹೆಚ್ಚುವರಿ ಹೊಣೆಗಾರಿಕೆ
ರಾಜ್ಯ ಸರ್ಕಾರವು ಎಂ.ಎನ್. ಅನುಚೇತ್ ಅವರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜೊತೆಗೆ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಜವಾಬ್ದಾರಿಯನ್ನೂ ವಹಿಸಿದೆ.
ಕೋಲಾರ ಮೂಲದ ಅಧಿಕಾರಿ
ಎಂ.ಎನ್. ಅನುಚೇತ್ ಅವರು ಮೂಲತಃ ಕೋಲಾರ ಜಿಲ್ಲೆಯವರಾಗಿದ್ದಾರೆ. ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2006ರಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ್ದಾರೆ. ನಾಗರಿಕ ಸೇವೆಗೆ ಸೇರುವ ಉದ್ದೇಶದಿಂದ ಸಿದ್ಧತೆ ನಡೆಸಿದ ಅವರು, 2008ರ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ, 2009ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದರು.

ಪೊಲೀಸ್ ಇಲಾಖೆಯಲ್ಲಿ ಗಮನಾರ್ಹ ಸೇವೆ

ಪೊಲೀಸ್ ಇಲಾಖೆಯಲ್ಲಿ ತಂತ್ರಜ್ಞಾನ ಆಧಾರಿತ ಆಡಳಿತ ಮತ್ತು ಸಮರ್ಥ ಕಾರ್ಯನಿರ್ವಹಣೆಗೆ ಅನುಚೇತ್ ಹೆಸರುವಾಸಿಯಾಗಿದ್ದಾರೆ. ಅವರು ಕೈಗೊಂಡ ತನಿಖಾ ಕಾರ್ಯಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಪ್ರತಿಷ್ಠಿತ ಕೇಂದ್ರ ಗೃಹ ಸಚಿವರ ಅತ್ಯುತ್ತಮ ತನಿಖಾ ಪದಕ ನೀಡಿ ಗೌರವಿಸಿತ್ತು. 2011ರಲ್ಲಿ ಪುತ್ತೂರಿನಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕರಾಗಿ (ASP) ವೃತ್ತಿಜೀವನ ಆರಂಭಿಸಿದ ಅವರು, ನಂತರ ಸಿಐಡಿ ವಿಭಾಗದ ಎಸ್ಪಿ, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಸೇರಿದಂತೆ ಹಲವು ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತ (ಸಂಚಾರ)ರಾಗಿ ಕಾರ್ಯನಿರ್ವಹಿಸಿದ್ದ ಅವರು, ನಗರ ಸಂಚಾರ ನಿರ್ವಹಣೆಯಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಅಳವಡಿಕೆಗೆ ಪ್ರಮುಖ ಕೊಡುಗೆ ನೀಡಿದ್ದರು. ಈ ಹುದ್ದೆಗೆ ಮುನ್ನ ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಅಧಿಕಾರಿಗಳು ಉಪಸ್ಥಿತಿ

ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ್, ಸಿದ್ದೇಶ್ವರಪ್ಪ ಜಿ.ಬಿ., ಸಿ.ಆರ್. ನವೀನ್, ಉಪನಿರ್ದೇಶಕರಾದ ಬಿ.ಕೆ. ರಾಮಲಿಂಗಪ್ಪ, ಶಫಿ ಸಾದುದ್ಧಿನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net