ಈ ಹಿಂದೆ ಮಧ್ಯಪ್ರಾಚ್ಯಗಳ ವಿಚಾರದಲ್ಲಿ ಅಮೇರಿಕಾ ಮಧ್ಯೆ ಪ್ರವೇಶಿಸಿದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಆ ಬಗ್ಗೆ ಆಕ್ಷೇಪ ಎತ್ತಿದ್ದರು. ಅಂತಹ ಎದೆಗಾರಿಕೆ ಮೋದಿಗೆ ಯಾಕೆ ಇಲ್ಲ? ಎಂದು ಪ್ರಶ್ನಿಸಿದ ಸಚಿವರು, ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಬಿಜೆಪಿವರು ನೆಹರು , ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಮಾತನಾಡುತ್ತಾರೆ. ಸ್ವತಃ ಮೋದಿ ಸಿನೆಮಾ ನಟ ನಟಿಯರ ಮದುವೆ, ಕ್ರಿಕೆಟ್ ತಂಡಕ್ಕೆ ಶುಭಾಶಯ ಕೋರಲು ಹೋಗುತ್ತಾರೆ. ಆದರೆ, ವಿದೇಶಾಂಗ ನೀತಿಗಖ ಬಗ್ಗೆ ಭಾರತ ದಿಟ್ಟನಿಲುವಿನ ಬಗ್ಗೆ ಮಾತನಾಡಲು ಅವರಿಗೆ ಸಮಯವಿಲ್ಲ ಎಂದು ಕುಟುಕಿದರು.