ಸಿಎಂ ಪದಗ್ರಹಣಕ್ಕೆ 80ಕ್ಕೂ ಹೆಚ್ಚು ಬಸ್ ವ್ಯವಸ್ಥೆ / NELAMANGAL
ನೆಲಮಂಗಲ ತಾಲೂಕು ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ನಿಂದ ಮುಖ್ಯಮಂತ್ರಿ ಪದಗ್ರಹಣ ಸಮಾರಂಭ ಕುರಿತು ಆಯೋಜಿಸಿದ್ದ ಸಭೆಯಲ್ಲಿ ನೆ.ಯೋ.ಪ್ರಾಧಿಕಾರ ಸದಸ್ಯ ವೆಂಕಟೇಶ್, ಮಾಜಿ ಅಧ್ಯಕ್ಷ ಎಂ.ನಾರಾಯಣ್ಗೌಡ, ಮಾಜಿ ಸದಸ್ಯ ಬಿ.ಜಿ.ವಾಸು, ನಗರಸಭೆ ಉಪಾಧ್ಯಕ್ಷ ಆನಂದ್ ಇದ್ದರು.
ನೆಲಮಂಗಲ : ಮುಖ್ಯಮಂತ್ರಿ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಅತಿ ಹೆಚ್ಚು ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸಿ.ಪ್ರದಿಪ್ ತಿಳಿಸಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ನಿಂದ ಮುಖ್ಯಮಂತ್ರಿ ಪದಗ್ರಹಣ ಸಮಾರಂಭ ಕುರಿತು ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಪೂರೈಸಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿದ್ದು, ರಾಜ್ಯದ ಜನತೆಗೆ ಖುಷಿ ತಂದಿದೆ ಎಂದರು.
ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಸ್ವೀಕಾರ ಮಾಡಲಿದ್ದು, ತಾಲೂಕಿನಾದ್ಯಂತ ಅತಿಹೆಚ್ಚು ಸಂಖ್ಯೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.
ಕ್ಷೇತ್ರದಲ್ಲಿ ಶಾಸಕ ಎನ್.ಶ್ರೀನಿವಾಸ್ ಅವರು ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮಕ್ಕೆ ತಾಲೂಕಿನಿಂದ ಸುಮಾರು 80ಕ್ಕೂ ಹೆಚ್ಚು ಬಸ್ ವ್ಯವಸ್ಥೆ ಮಾಡಿದ್ದು, ಸುಮಾರು 40ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ಜತೆಗೆ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಸಕಲ ವ್ಯವಸ್ಥೆ ಹಾಗೂ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಸದಸ್ಯ ಪುರುಷೋತ್ತಮ್, ಗ್ಯಾರಂಟಿ ಸಮಿತಿ ಅಧ್ಯೆ ನಾಗರತ್ನಮ್ಮ, ವಕೀಲ ರುನಾಥ್, ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಕುಮಾರ್, ಮುಖಂಡ ರವಿಕುಮಾರ್, ರಾಮಚಂದ್ರ, ಹನುಮಂತಮ್ಮಮತ್ತಿತರರು ಇದ್ದರು.
ಶಾಸಕರಿಗೆ ಜವಬ್ದಾರಿ ನೀಡಲಿ: ಕ್ಷೇತ್ರದ ಶಾಸಕ ಎನ್.ಶ್ರೀನಿವಾಸ್ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಶಾಸಕರು ಕ್ಷೇತ್ರದ ಜತೆಗೆ ರಾಜ್ಯದ ಸೇವೆಯೂ ಮಾಡಲಿ ಅದ್ದರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಂಪುಟದಲ್ಲಿ ಯಾವುದಾದರೂ ಒಂದು ಜವಾಬ್ದಾರಿ ನೀಡಬೇಕೆಂದು ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಒತ್ತಾಯಿಸಿದರು.