ಸಮ್ಮೇಳನದಲ್ಲಿ ಸಾಮಾಜಿಕ ಸಾಮರಸ್ಯ, ಕುಟುಂಬ ಪ್ರಬೋಧನ್, ಪರಿಸರ ಸಂರಕ್ಷಣೆ, ಸ್ವದೇಶಿ ಜೀವನಶೈಲಿ ಹಾಗೂ ನಾಗರಿಕ ಶಿಷ್ಟಾಚಾರದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಈ ಸಂಬಂಧ ಗೋಪೂಜೆ, ಶೋಭಾಯಾತ್ರೆ, ಬೈಕ್ ರ‌್ಯಾಲಿ, ಸ್ವದೇಶೀ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ, ಸಾಂಸ್ಕೃತಿಕ ಹಾಗೂ ದೇಶಭಕ್ತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.