ಪ್ರಸಕ್ತ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆ:ಏ.9ವರೆಗೆ ಅಲ್ಲಲ್ಲಿ ವರ್ಷಧಾರೆ
ವಾಡಿಕೆಗಿಂತ ಅಧಿಕ ಮಳೆ
Published on:
Copied
Follow Us
ಬೆಂಗಳೂರು: ಪ್ರಸಕ್ತ ತಿಂಗಳಲ್ಲಿ ವಾಡಿಕೆಗಿಂತ ಅಧಿಕವಾಗಿ ಮಳೆಯಾಗಲಿದೆ. ವಾಡಿಕೆಯಂತೆ 30 ಮಿಮೀ ಮಳೆಯಾಗಬೇಕಿತ್ತು. ಆದರೆ. 60 ಮಿಮೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
ರಾಜ್ಯದ ಒಂದರೆಡು ಸ್ಥಳಗಳಲ್ಲಿ ಗುರುವಾರ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 2 ದಿನ ಗುಡುಗು ಮತ್ತು ಬಿರುಗಾಳಿ ಸಹಿತ ವರ್ಷಧಾರೆಯಾಗಲಿದೆ.
ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಏ.3ರಂದು, ಕೊಪ್ಪಳ, ರಾಯಚೂರು, ಚಿತ್ರದುರ್ಗ, ವಿಜಯನಗರ ಮತ್ತು ತುಮಕೂರಿನಲ್ಲಿ ಏ.4ರಿಂದ ಏ.5ರವರೆಗೆ ಸಾಧಾರಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಏ.5ರಿಂದ ಏ.9ವರೆಗೆ ಮಳೆ ಸುರಿಯಲಿದೆ.
ಕರಾವಳಿ ಕರ್ನಾಟಕದ ಭೌಗೋಳಿಕ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ 2 ಡಿ.ಸೆ.ನಿಂದ 3 ಡಿ.ಸೆ.ವರೆಗೆ ಅಧಿಕವಾಗಿ ಉಷ್ಣಾಂಶ ದಾಖಲಾಗುತ್ತಿದೆ. ಕಲಬುರಗಿಯಲ್ಲಿ ಗುರುವಾರ 38.6 ಡಿಸೆ. ಉಷ್ಣಾಂಶ ಕಂಡುಬಂದಿದೆ. ರಾಜ್ಯದಲ್ಲಿ ಮುಂದಿನ 5 ದಿನ ಉಷ್ಣಾಂಶದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.