ನಿಧಾನ ಕಲಿಕೆಯ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಾಗಾರ

ಕೊಳ್ಳೇಗಾಲ ಪಟ್ಟಣದ ಎಂಜಿಎಸ್‌ವಿ ಪ್ರೌಢಶಾಲೆಯಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ನಡೆಸಿದ ಪ್ರೇರಣಾ ಕಾರ್ಯಾಗಾರಕ್ಕೆ ಚಾಮರಾಜನಗರ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರ ಪಾಟೀಲ್ ಭೇಟಿ ನೀಡಿ ಪರಿಶೀಲಿಸಿದರು. ಬಿಇಒ ಮಂಜುಳಾ ಇದ್ದಾರೆ.

Published on
ಕೊಳ್ಳೇಗಾಲ: ತಾಲೂಕಿನ ಎಸ್ಸೆಸ್ಸೆಲ್ಸಿ ವ್ಯಾಸಾಂಗ ಮಾಡುತ್ತಿರುವ ನಿಧಾನ ಕಲಿಕೆಯ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಾಗಾರವನ್ನು ಸೋಮವಾರ ನಡೆಸಲಾಯಿತು.
ಈಗಾಗಲೇ ಎಸ್ಸೆಸ್ಸೆಲ್ಸಿ ಮಕ್ಕಳಿಗೆ 1 ಮತ್ತು 2 ನೇ ರಾಜ್ಯ ಪೂರ್ವ ಸಿದ್ಧತೆಯ ಪರೀಕ್ಷೆ ನಡೆದಿದ್ದು, ಈ ಫಲಿತಾಂಶದಲ್ಲಿ ವಿವಿಧ ಶಾಲೆಯ 300 ನಿಧಾನ ಕಲಿಕೆಯ ಮಕ್ಕಳನ್ನು ಗುರುತಿಸಲಾಗಿದೆ. ಈ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಣ ಇಲಾಖೆ ವಿಷಯವಾರು ಸಂಪನ್ಮೂಲ ಶಿಕ್ಷಕರಿಂದ ಪ್ರೇರಣಾ ಕಾರ್ಯಾಗಾರ ನೀಡಲಾಗುತ್ತಿದೆ. 8 ಶಾಲಾ ಕೇಂದ್ರಗಳಲ್ಲಿ ಮಕ್ಕಳಿಗೆ ಕಾರ್ಯಾಗಾರ ನಡೆಯುತ್ತಿದೆ.
ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರ ಪಾಟೀಲ್ ಮಾತನಾಡಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಈಗಾಗಲೇ 1 ಮತ್ತು 2ನೇ ರಾಜ್ಯ ಪೂರ್ವ ಸಿದ್ಥತೆ ಪರೀಕ್ಷೆ ಬರೆದಿದ್ದು, ತಾಲೂಕಿನಲ್ಲಿ ಪರೀಕ್ಷೆ ಬರೆದ ಒಟ್ಟು ವಿದ್ಯಾರ್ಥಿಗಳ ಪೈಕಿ 300 ನಿಧಾನ ಕಲಿಕೆಯ ಮಕ್ಕಳಿಗೆ ಪ್ರೇರಣಾ ಕಾರ್ಯಾಗಾರವನ್ನು ಸಂಪನ್ಮೂಲ ವ್ಯಕ್ತಿಗಳಿಂದ ಕೊಡಿಸಲಾಗುತ್ತಿದೆ. ಮುಂಬರುವ 3ನೇ ರಾಜ್ಯ ಪೂರ್ವ ಸಿದ್ಧತೆ ಪರೀಕ್ಷೆಯಲ್ಲಿ ಮಕ್ಕಳು ಉತ್ತಮ ರೀತಿಯಲ್ಲಿ ಸಾಧನೆ ಮಾಡಲು ಸಹಕಾರಿಯಾಗಲಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net