ಸರ್ಕಾರಿ ಶಾಲೆಗೆ ಮಕ್ಕಳ ಕರೆತರಲು ಆಂದೋಲನ government schools

ಸರ್ಕಾರಿ ಶಾಲೆಗೆ ಮಕ್ಕಳ ಕರೆತರಲು ಆಂದೋಲನ government schools
ಸರ್ಕಾರಿ ಶಾಲೆಗೆ ಮಕ್ಕಳ ಕರೆತರಲು ಆಂದೋಲನ government schools
Published on
ಬೂದಿಕೋಟೆ: ಬದಲಾಗುತ್ತಿರುವ ಕಾಲಘಟ್ಟದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ತಾಲೂಕಿನ ಕಳವಂಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಮಾದರಿ ಹೆಜ್ಜೆಯನ್ನಿಟ್ಟಿದೆ.government schools
2026-&27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮಂಗಳವಾರ ಚಾಲನೆ ನೀಡಿರುವ ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ಗ್ರಾಮಸ್ಥರಲ್ಲಿ ಸರ್ಕಾರಿ ಶಾಲೆಯ ಬಗ್ಗೆ ಜಾಗೃತಿ ಮೂಡಿಸಲು ವಿಶಿಷ್ಟ ಆಂದೋಲನ ಹಮ್ಮಿಕೊಂಡಿದ್ದಾರೆ.
ಕಚೇರಿಯೊಳಗೆ ಕುಳಿತು ದಾಖಲಾತಿ ಮಾಡಿಕೊಳ್ಳುವ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟಿರುವ ಶಾಲೆಯ ಮುಖ್ಯಶಿಕ್ಷಕಹಾಗೂ ಸಹಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಸೇರಿ ಗ್ರಾಮದ ಪ್ರತಿಮನೆಯ ಬಾಗಿಲಿಗೂ ತೆರಳಿ ಪಾಲಕರನ್ನು ಭೇಟಿ ಮಾಡುತ್ತಿದ್ದಾರೆ.
ಶಾಲೆಯಲ್ಲಿ ಲಭ್ಯವಿರುವ ಗುಣಮಟ್ಟದ ಶಿಕ್ಷಣ, ನುರಿತ ಶಿಕ್ಷಕರು, ಪಠ್ಯೇತರ ಚಟುವಟಿಕೆಗಳು ಹಾಗೂ ಸರ್ಕಾರ ನೀಡುವ ಸೌಲಭ್ಯಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡುವ ಮೂಲಕ ಪಾಲಕರಲ್ಲಿ ಭರವಸೆ ಮೂಡಿಸುತ್ತಿದ್ದು, "ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ- ಭವಿಷ್ಯ ರೂಪಿಸಿ' ಎಂಬ ಘೋಷವಾಕ್ಯಗಳೊಂದಿಗೆ ಆಂದೋಲನ ಸಾಗಿದೆ.
ಶಾಲೆಯು ಆಧುನಿಕ ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ಸಜ್ಜುಗೊಗೊಂಡಿದ್ದು, ಎಲ್​ಕೆಜಿಯಿಂದ 8ನೇ ತರಗತಿಯವರೆಗೆ ಕನ್ನಡದ ಜತೆಗೆ ಆಂಗ್ಲ ಮಾಧ್ಯಮದಲ್ಲಿಯೂ ಬೋಧನೆ, ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯದ ಜತೆಗೆ ವಾರಕ್ಕೆ 6 ದಿನ ಮೊಟ್ಟೆ ಅಥವಾ ಬಾಳೆಹಣ್ಣು ವಿತರಣೆ ಮಾಡಲಾಗುತ್ತದೆ. ಶುದ್ಧ ಕುಡಿಯುವ ನೀರು ಹಾಗೂ ರಾಗಿ ಮಾಲ್ಟ್​ ವ್ಯವಸ್ಥೆಯೂ ಇದೆ. ಕಂಪ್ಯೂಟರ್​ ಶಿಕ್ಷಣ, ಸುಸಜ್ಜಿತ ಗ್ರಂಥಾಲಯ ಹಾಗೂ ಪ್ರಾಯೋಗಾಲಯದ ಸೌಲಭ್ಯ. ಪ್ರತಿ ಶನಿವಾರ ಚಟುವಟಿಕೆ ಆಧಾರಿತ ಕಲಿಕೆಗೆ ಒತ್ತು ನೀಡಲಾಗುತ್ತಿದೆ. ವಿಶಾಲವಾದ ಆಟದ ಮೈದಾನ, ಪರಿಸರ ಸ್ನೇಹಿ ವಾತಾವರಣ ಹಾಗೂ ಗಂಡು, ಹೆಣ್ಣು ಮತ್ತು ಅಂಗವಿಕಲ ಮಕ್ಕಳಿಗೆ ಪ್ರತ್ಯೇಕ ಶೌಚಗೃಹ. ಪಠ್ಯಪುಸ್ತಕ, ಸಮವಸ್ತ್ರ, ಶೂ-&ಸಾಕ್ಸ್​ ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಶುಚಿ ಪ್ಯಾಡ್​ ವಿತರಣೆ ಮಾಡಲಾಗುತ್ತಿದೆ ಎಂದು ಪಾಲಕರಿಗೆ ಮಾಹಿತಿ ನೀಡಿ, ಸರ್ಕಾರಿ ಶಾಲೆಗೆ ಮಕ್ಕಳನ್ನು ಕರೆತರುತ್ತಿದ್ದಾರೆ.
ಖಾಸಗಿ ಶಾಲೆಗಳ ಪ್ರವೇಶ ಶುಲ್ಕದ ಹೊರೆಯ ನಡುವೆ ಗುಣಮಟ್ಟದ ಶಿಕ್ಷಣ ಉಚಿತವಾಗಿ ನೀಡುತ್ತಿರುವ ಸರ್ಕಾರಿ ಶಾಲೆಯ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net