ಜಿಲ್ಲಾ ಕೇಂದ್ರ ಸ್ಥಾನ ಬಾಗಲಕೋಟೆ, ಮುಧೋಳ, ಜಮಖಂಡಿ, ಬೀಳಗಿ, ಬಾದಾಮಿ, ಗುಳೇದಗುಡ್ಡ, ಇಳಕಲ್ಲ, ಹುನಗುಂದ ಗೂಡೂರ, ಕಲಾದಗಿ ಸೇರಿದಂತೆ ಜಿಲ್ಲೆಯ ಎಲ್ಲ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಮೊಹರಂ ಹಬ್ಬದ ಸಂಭ್ರಮ ಮುಕ್ತಾಯಗೊಂಡಿತು. ಸಹಸ್ರಾರು ಭಕ್ತರು ಅಲಾಯಿ ದೇವರಿಗೆ ನಮಿಸಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಮುಸ್ಲಿಂ ಸಮುದಾಯಕ್ಕಿಂತ ಹೆಚ್ಚಾಗಿ ಹಿಂದೂಗಳೆ ಈ ಹಬ್ಬದಲ್ಲಿ ಪಾಲ್ಗೊಳ್ಳುವುದು ವಿಶೇಷ. ಮನೆಯಿಂದ ಚೂಂಗೆ, ಹೋಳಿಗೆ ಮಾಡಿಕೊಂಡು ದೇವರಿಗೆ ಅರ್ಪಿಸಿದರು.