ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಡಾ.ಶ್ಯಾಮಾಪ್ರಸಾದ್ ಮುಖರ್ಜಿ ಅವರ 125ನೇ ಜನ್ಮ ವಾರ್ಷಿಕೋತ್ಸವ ನಿಮಿತ್ತ ವಿಕಸಿತ ಭಾರತಕ್ಕಾಗಿ ಡಾ.ಶ್ಯಾಮಾಪ್ರಸಾದ್ ಮುಖರ್ಜಿ ಅವರ ದೃಷ್ಟಿಕೋನ ವಿಷಯ ಕುರಿತು ಗುರುವಾರ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೇಷ್ಠ ಶಿಕ್ಷಣ ತ, ಸಮರ್ಥ ಸಂಸದೀಯ ನಾಯಕ ಹಾಗೂ ರಾಷ್ಟ್ರೀಯ ಚಿಂತಕರಾಗಿದ್ದ ಮುಖರ್ಜಿ, 33ರ ವಯಸ್ಸಿನಲ್ಲೆ ಭಾರತದ ಅತ್ಯಂತ ಕಿರಿಯ ಉಪಕುಲಪತಿಗಳಲ್ಲಿ ಒಬ್ಬರಾಗಿದ್ದವರು. ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಸೇವೆ ಸಲ್ಲಿಸಿದ್ದರು. ಪ್ರಜಾಪ್ರಭುತ್ವದ ಮೌಲ್ಯ ಮತ್ತು ರಾಷ್ಟ್ರೀಯ ಹಿತಾಸಕ್ತಿ ವಿಷಯದಲ್ಲಿ ರಾಜಿ ಮಾಡಿಕೊಳ್ಳದೆ ದಿಟ್ಟ ಹೋರಾಟ ನಡೆಸಿದ್ದರು ಎಂದು ಸ್ಮರಿಸಿದರು.