ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ನಿಮ್ಮ ಅಫಿಡವಿಟ್ ನಲ್ಲಿ ದುಬಾರಿ ವಾಚ್ ಬಗ್ಗೆ ತಿಳಿಸಿಲ್ಲ ಎಂಬ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ನಾರಾಯಣಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರಿಗೇನು ಗೊತ್ತು? ನನ್ನ ಅಫಿಡವಿಟ್ ನನಗೆ ಗೊತ್ತು, ಕಾಸು ಕೊಟ್ಟಿರುವುದು ನಾನು, ಕ್ರೆಡಿಟ್ ಕಾರ್ಡ್ ಬಳಸಿರೋದು ನಾನು. ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ನನ್ನ ಬಳಿ ರೋಲೆಕ್ಸ್ ವಾಚ್ ಇರುವುದನ್ನೂ ಹೇಳಿದ್ದೇನೆ. ನಾರಾಯಣಸ್ವಾಮಿಯಿಂದ ಕಲಿಯುವುದೇನಿಲ್ಲ” ಎಂದು ಹೇಳಿದರು.