ಬೆಳಗ್ಗೆ ಪೇಪರ್ ಓದುವಾಗ ನೋಡಿದೆ, ‘ಕುಮಾರಸ್ವಾಮಿಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ಲ’ ಎಂದು ಒಬ್ಬ ವ್ಯಕ್ತಿ ಹೇಳಿದ್ದಾರೆ. ‘ಕುಮಾರಸ್ವಾಮಿ ಮಾಡಿದ ಬಿಡದಿ ಟೌನ್‌ಶಿಪ್ ಅನ್ನು ನಾನು ಮಾಡುತ್ತಿದ್ದೇನೆ’ ಎಂದಿದ್ದಾರೆ. ಆಗ ಕುಮಾರಸ್ವಾಮಿ ಮಾಡಲು ಹೊರಟಿದ್ದು ಏನು, ಈ ವ್ಯಕ್ತಿ ಈಗ ಮಾಡುತ್ತಿರುವ ದಂಧೆ ಏನು ಎಂಬುದು ಜನರಿಗೆ ಅರ್ಥವಾಗಿದೆ. ಅದರ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.