ನಾಗಮಂಗಲ ಮಾಜಿ ಶಾಸಕ ಸುರೇಶ್‌ಗೌಡ ಕಾರು ಅಪಘಾತ; ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು

EX MLA Suresh Gowda
EX MLA Suresh Gowda
Published on
ಮಂಡ್ಯ: ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಸುರೇಶ್‌ಗೌಡ ಪ್ರಯಾಣಿಸುತ್ತಿದ್ದ ಕಾರು ಬಸರಾಳು ಗ್ರಾಮದ ಸಮೀಪ ಭೀಕರ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಸುರೇಶ್‌ಗೌಡ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಮದುವೆ ಸಮಾರಂಭವೊಂದನ್ನು ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಜಖಂಗೊಂಡಿದೆ. ಸುರೇಶ್‌ಗೌಡ ಅವರ ಕೈ ಬೆರಳುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕಾರಿನಲ್ಲಿದ್ದ ಚಾಲಕ ಶೇಖರ್‌, ಬಿಂಡಿನಹಳ್ಳಿ ಪ್ರಸನ್ನ, ಗನ್‌ಮ್ಯಾನ್​ಗೂ ಸಹ ಗಂಭೀರ ಗಾಯಗಳಾಗಿವೆ.
ಸದ್ಯ ಮಾಜಿ ಶಾಸಕ ಸುರೇಶ್​ಗೌಡರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಪಟ್ಟಂತೆ ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net