ಉತ್ತರ ಕರ್ನಾಟಕದಲ್ಲಿ ನಾಗರಪಂಚಮಿ ಸಂಭ್ರಮ ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ಮೊದಲ ದಿನ ರೊಟ್ಟಿ ಪಂಚಮಿ, ಎರಡನೇ ದಿನ ನಾಗರ ಚೌತಿ, ಮೂರನೇ ದಿನ ನಾಗರ ಪಂಚಮಿ ಎಂದು ಆಚರಿಸಲಾಗುತ್ತದೆ. ಹಾಗಾಗಿ ನಗರದಲ್ಲಿ ಉತ್ತರ ಕರ್ನಾಟಕದ ಮಂದಿ ನೆಲೆಸಿರುವ ಬಡಾವಣೆಗಳಲ್ಲಿ ನಾಗಪಂಚಮಿ ಅತ್ಯಂತ ವಿಜೃಂಭಣೆಯಿಂದ ಆಚರಣೆಗೊಳ್ಳುತ್ತಿರುವುದು ವಿಶೇಷವಾಗಿತ್ತು.