ನಾಲ್ವಡಿ ಕೃಷ್ಣರಾಜ ಒಡೆಯರ್​ ಜನ್ಮದಿನಾಚರಣೆ

ಕನ್ನಡ ಸಾಹಿತ್ಯ ಪರಿಷತ್​ ಸಂಸ್ಥಾಪಕ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್​ 142ನೇ ಜನ್ಮದಿನಾಚರಣೆ ಕಾರ್ಯಕ್ರಮ ಜಿಲ್ಲಾ ಕಸಾಪ ದ ಆಶ್ರಯದಲ್ಲಿ ಕಲಬುರಗಿ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಗುರುವಾರ ಜರುಗಿತು. ನರಸಿಂಗರಾವ್​ ಹೇಮನೂರ್​, ವಿಜಯಕುಮಾರ ಪಾಟೀಲ್​ ತೇಗಲತಿಪ್ಪಿ, ಸೈಯದ್​ ನಜಿರುದ್ದಿನ್​ ಮುತ್ತವಲ್ಲಿ, ಶರಣರಾಜ ಛಪ್ಪರಬಂದಿ ಇತರರಿದ್ದರು.

Published on
ಕಲಬುರಗಿ : ಕನ್ನಡ ಸಾಹಿತ್ಯ ಪರಿಷತ್​ ಸಂಸ್ಥಾಪಕ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್​ 142ನೇ ಜನ್ಮದಿನಾಚರಣೆ ಕಾರ್ಯಕ್ರಮ ಜಿಲ್ಲಾ ಕಸಾಪ ದ ಆಶ್ರಯದಲ್ಲಿ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಗುರುವಾರ ಅರ್ಥಪೂರ್ಣವಾಗಿ ಜರುಗಿತು.
ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಆದರ್ಶ ರಾಜ್ಯದ ಪರಿಕಲ್ಪನೆಯನ್ನು ದೇಶದಲ್ಲಿ ಮೊದಲ ಬಾರಿಗೆ ಜಾರಿಗೆ ತಂದಿರುವ ಮತ್ತು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್​ ಸ್ಥಾಪಿಸುವ ಮೂಲಕ ಕನ್ನಡಿಗರನ್ನು ಒಂದುಗೂಡಿಸಿದ್ದಾರೆ. ದೂರದೃಷ್ಟಿತ್ವದ ಆಡಳಿತ, ಜನಪರ ನಿರ್ಧಾರ, ಸಾಮಾಜಿಕ ನ್ಯಾಯದ ಕ್ರಾಂತಿ ಹೀಗೆ ಅವರ ಅನೇಕ ಸಾಧನೆಗಳು ಇಂದಿನ ಸಮಾಜಕ್ಕೆ ಮಾದರಿ ಮತ್ತು ಪ್ರೇರಣೆ ಎಂದರು.
ಕನ್ನಡ ಸಾಹಿತ್ಯ ಪರಿಷತ್​ ಸದಸ್ಯರನ್ನು ಕೇವಲ ಚುನಾವಣೆಯಲ್ಲಿ ಮತ ಚಲಾಯಿಸಲಿಕ್ಕೆ ಮಾತ್ರ ಸೀಮಿತಗೊಳಿಸದೆ, ಅವರನ್ನು ಮತ್ತಷ್ಟು ಪರಿಷತ್ತಿನ ಚಟುವಟಿಕೆಗಳಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪರಿಷತ್ತಿನ ಸರ್ವ ಸದಸ್ಯರ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಶ್ರೀದಲ್ಲೇ ದಿನಾಂಕ ಪ್ರಕಟಿಸಲಾಗುವುದು ಎಂದರು.
ಹಿರಿಯ ಸಾಹಿತಿ ನರಸಿಂಗರಾವ ಹೇಮನೂರ, ಕೇಂದ್ರ ಕಸಾಪ ಪ್ರತಿನಿಧಿ ಸೈಯ್ಯದ್​ ನಜಿರುದ್ದಿನ್​ ಮುತ್ತವಲ್ಲಿ, ಪ್ರಮುಖರಾದ ಶರಣರಾಜ ಛಪ್ಪರಬಂದಿ, ಗಣೇಶ ಚಿನ್ನಾಕಾರ, ರಾಜೇಂದ್ರ ಮಾಡಬೂಳ, ಪ್ರಭವ ಪಟ್ಟಣಕರ್​, ಧೂಳಪ್ಪ ದ್ಯಾಮನಕರ್​, ಜ್ಯೋತಿ ಕೋಟನೂರ್​, ನಾಗರಾಜ ಮೈಲ್ವಾರ್​, ರಂಗೋಲಿ, ರಾಜಶೇಖರ ಚಿಂಚೋಳಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net