ರಾಷ್ಟ್ರೀಯ ಐಕ್ಯತಾ ಕಾರ್ಯಕ್ರಮ

ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಪ್ರಥಮ ಕೇಂದ್ರ ಗೃಹ ಸಚಿವ, ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನ ಹಾಗೂ ರಾಷ್ಟ್ರೀಯ ಐಕ್ಯತಾ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಪಿಎಸೈ ವೆಂಕಟೇಶ ಮಾಡಗೇರಿ, ಠಾಣೆಯ ಸಿಬ್ಬಂದಿ, ಆಟೋ ಚಾಲಕರು, ಸಾರ್ವಜನಿಕರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನಾಚರಣೆ
ಮುದಗಲ್: ಸಾರ್ವಜನಿಕರೆಲ್ಲರೂ ಕಾನೂನು ನಿಯಮಗಳನ್ನು ಪಾಲಿಸಬೇಕು. ಪ್ರತಿಯೊಬ್ಬರೂ ಕಾನೂನಿಗೆ ಗೌರವ ನೀಡುವ ಮೂಲಕ ಸುಧಾರಿತ ಸಮಾಜ ನಿರ್ಮಾಣ ಮಾಡುವಲ್ಲಿ ಪಾತ್ರ ವಹಿಸಬೇಕೆಂದು ಪಿಎಸೈ ವೆಂಕಟೇಶ ಮಾಡಗೇರಿ ಹೇಳಿದರು. 
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ದೇಶದ ಪ್ರಪ್ರಥಮ ಕೇಂದ್ರ ಸಚಿವ ಹಾಗೂ ಉಪ ಪ್ರಧಾನಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನ ಹಾಗೂ ರಾಷ್ಟ್ರೀಯ ಐಕ್ಯತಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.  
ಉಕ್ಕಿನ ಮನುಷ್ಯ ಎಂದೇ ಖ್ಯಾತರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಸ್ಮರಣಾರ್ಥವಾಗಿ ಮತ್ತು ದೇಶದ ಏಕತೆ, ಸಮಗ್ರತೆಯ ಸಂದೇಶ ಸಾರಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 
ಮಹನೀಯರ ಆದರ್ಶಗಳನ್ನು ಪಾಲಿಸೋಣ ಎಂದರು. ಠಾಣೆಯ ಸಿಬ್ಬಂದಿ, ಆಟೋ ಚಾಲಕರು, ಸಾರ್ವಜನಿಕರಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net