ಪ್ರಕೃತಿ ಸಂರಕ್ಷಣೆಗೆ ಆದ್ಯತೆ ಅಗತ್ಯ

ಬೆಳಗಾವಿ ನಗರದಲ್ಲಿ ಎಸ್​.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಪರಿಸರ ದಿನ ಆಚರಿಸಲಾಯಿತು. ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ, ಡಾ.ಎಫ್​.ವಿ.ಮಾನ್ವಿ, ಡಾ.ಬಿ.ಆರ್​.ಪಟಗುಂದಿ ಇತರರಿದ್ದರು.
ಬೆಳಗಾವಿ ನಗರದಲ್ಲಿ ಎಸ್​.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಪರಿಸರ ದಿನ ಆಚರಿಸಲಾಯಿತು. ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ, ಡಾ.ಎಫ್​.ವಿ.ಮಾನ್ವಿ, ಡಾ.ಬಿ.ಆರ್​.ಪಟಗುಂದಿ ಇತರರಿದ್ದರು.
Published on
ಬೆಳಗಾವಿ: ನಾಡಿನ ನೆಲ&ಜಲ, ಅರಣ್ಯ, ಪರಿಸರ, ವನ್ಯಜಿವಿಗಳು, ಜೀವ&ವೈವಿಧ್ಯ ಮತ್ತು ಜಲ ಸಂಪನ್ಮೂಲಗಳನ್ನು ಸಂರಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಕೊಡುಗೆಯಾಗಿ ನೀಡುವುದು ನಮ್ಮೆಲ್ಲರ ಗುರುತರ ಜವಾಬ್ದಾರಿಯಾಗಿದೆ ಎಂದು ತೊಂಟದಾರ್ಯ ಸಂಸ್ಥಾನಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.
ಶಿವಬಸವ ನಗರದ ಎಸ್​.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನದ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆ ಟಕದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿ, ಪರಿಸರ ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಪ್ರಕೃತಿಯಲ್ಲಿನ ಎಲ್ಲ ಜೀವರಾಶಿಗಳಿಗೆ ಅನ್ನ, ಆಶ್ರಯ ನೀಡಿರುವ ಪರಿಸರದ ಕುರಿತು ಪ್ರತಿದಿನ ಚಿಂತಿಸುವ ಅಗತ್ಯವಿದೆ ಎಂದರು.
ಎಸ್​ಜಿಬಿಐಟಿ ಕಾಲೇಜು ಆಡಳಿತ ಮಂಡಳಿ ಅಧ್ಯ ಡಾ.ಎಫ್​.ವಿ.ಮಾನ್ವಿ ಮಾತನಾಡಿ, ಹಸಿರು ಪರಿಸರ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿ ನೆಟ್ಟು ಅದರ ಪೋಷಣೆ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದರು. ಪ್ರಾಚಾರ್ಯ ಡಾ.ಬಿ.ಆರ್​.ಪಟಗುಂದಿ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಮಂಜುನಾಥ ಶರಣಪ್ಪನವರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net