ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಅಗತ್ಯ ನೆರವು - ಸಂಸದ ಪಿ.ಸಿ. ಮೋಹನ್ ಭರವಸೆ

Cubbon park development meeting
Cubbon park development meeting
Published on

ಪ್ರಮುಖ ಮುಖ್ಯಾಂಶಗಳು

  • ಮೂಲಸೌಕರ್ಯ ಅಭಿವೃದ್ಧಿಗಾಗಿ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ (ಎಂಪಿ ಲ್ಯಾಡ್ಸ್) ನಿಧಿಯಿಂದ ನೆರವು
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಉದ್ಯಾನ ಕಬ್ಬನ್ ಪಾರ್ಕ್ ಮೂಲಸೌಕರ್ಯ ಅಭಿವೃದ್ಧಿಗಾಗಿ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ (ಎಂಪಿ ಲ್ಯಾಡ್ಸ್) ನಿಧಿಯಿಂದ ಅಗತ್ಯ ನೆರವು ನೀಡುವುದಾಗಿ ಸಂಸದ ಪಿ. ಸಿ. ಮೋಹನ್ ಭರವಸೆ ನೀಡಿದ್ದಾರೆ.
ಕಬ್ಬನ್ ಪಾರ್ಕ್‌ನಲ್ಲಿ ಸೋಮವಾರ ನಡೆದ ಸಭೆಯಲ್ಲಿ ಪಿ.ಸಿ.ಮೋಹನ್ ಅವರು ತೋಟಗಾರಿಕೆ ಇಲಾಖೆ ಹಾಗೂ ಕಬ್ಬನ್ ಪಾರ್ಕ್ ಕೋರ್ ಸಂರಕ್ಷಣಾ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಉದ್ಯಾನವನದ ಅಭಿವೃದ್ಧಿಗೆ ಅಗತ್ಯವಿರುವ ವಿವಿಧ ಕಾಮಗಾರಿಗಳ ಕುರಿತು ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಕಬ್ಬನ್ ಪಾರ್ಕ್‌ನಲ್ಲಿ ಹೊಸ ಶೌಚಗೃಹಗಳ ನಿರ್ಮಾಣ, ಸಾರ್ವಜನಿಕರಿಗೆ ಕುಳಿತುಕೊಳ್ಳಲು ಹೆಚ್ಚುವರಿ ಬೆಂಚುಗಳ ಅಳವಡಿಕೆ, ಕೊಳಗಳಿಗೆ ಗಾಳಿ ಯಂತ್ರ (ಏರೇಟರ್) ವ್ಯವಸ್ಥೆ, ಸಂಯುಕ್ತ ಗೋಡೆ ನಿರ್ಮಾಣ ಹಾಗೂ ಭದ್ರತೆಗಾಗಿ ಸಿಸಿ ಕ್ಯಾಮರಾಗಳ ಅಳವಡಿಕೆ ಸೇರಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಮೋಹನ್ ಭರವಸೆ ನೀಡಿದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಜಿ. ಕುಸುಮಾ ಹಾಗೂ ಕಬ್ಬನ್‌ಪಾರ್ಕ್ ವಾಯುವಿಹಾರಿಗಳ ಸಂಘದ ಅಧ್ಯಕ್ಷ ಎಸ್. ಉಮೇಶ್, ಕಬ್ಬನ್ ಪಾರ್ಕ್ ಕೋರ್ ಸಂರಕ್ಷಣಾ ಸಮಿತಿಯ ಸದಸ್ಯ ಟಿ. ಮಹಾಬಲೇಶ್ವರಪ್ಪ, ಪ್ರಭಾ, ಸುನೀತಾ ಕುಮಾರಿ, ಪ್ರಿಯಾ ಚೆಟ್ಟಿ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net