ಗುಣಮಟ್ಟದ ಸೇವೆಗೆ ಅಗತ್ಯ ಕ್ರಮ

ಯಾದಗಿರಿ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶುಕ್ರವಾರ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಭೇಟಿ ನೀಡಿ ಅಲ್ಲಿನ ವಿವಿಧ ಸೌಲಭ್ಯ ಕುರಿತು ವೈದ್ಯರೊಂದಿಗೆ ಚರ್ಚಿಸಿದರು. ಡಿಎಚ್ ಡಾ.ಆಫ್ರೀನ್ ರಿಜ್ವಾನ್, ಡಾ.ಶಿವಕುಮಾರ ಇತರರಿದ್ದರು.
ಯಾದಗಿರಿ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶುಕ್ರವಾರ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಭೇಟಿ ನೀಡಿ ಅಲ್ಲಿನ ವಿವಿಧ ಸೌಲಭ್ಯ ಕುರಿತು ವೈದ್ಯರೊಂದಿಗೆ ಚರ್ಚಿಸಿದರು. ಡಿಎಚ್ ಡಾ.ಆಫ್ರೀನ್ ರಿಜ್ವಾನ್, ಡಾ.ಶಿವಕುಮಾರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಾಕಾರಿ ರಾಹುಲ್ ಪಾಂಡ್ವೆ ಹೇಳಿಕೆ
  • ಯಾದಗಿರಿ ತಾಯಿ-ಮಕ್ಕಳ ಆಸ್ಪತ್ರೆ ಭೇಟಿ ಪರಿಶೀಲನೆ
ಯಾದಗಿರಿ:

ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾಽಕಾರಿ ರಾಹುಲ್ ಪಾಂಡ್ವೆ ಹೇಳಿದರು.

ಶುಕ್ರವಾರ ಮಧ್ಯಾಹ್ನ ಆರೋಗ್ಯ ಇಲಾಖೆಯ ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಮೂಲಸೌಕರ್ಯ ಹಾಗೂ ವಿವಿಧ ಸೌಲಭ್ಯಗಳ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಈಗಾಗಲೇ ಹಲವು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದ್ದು, ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಸೇವೆ ಒದಗಿಸಲು ಹೊಸ ಹೆರಿಗೆ ಕೊಠಡಿ (ಲೇಬರ್ ರೂಂ) ಸಿದ್ಧಪಡಿಸಲಾಗಿದೆ ಎಂದರು.
ನವಜಾತ ಶಿಶುಗಳ ಆರೈಕೆಗಾಗಿ ಹೊಸ ಎಸ್‌ಎನ್‌ಸಿಯು ಹಾಗೂ ಗಂಭೀರ ಸ್ಥಿತಿಯಲ್ಲಿರುವ ಮಕ್ಕಳ ಚಿಕಿತ್ಸೆಗೆ ಪಿಐಸಿಯು ಘಟಕ ಆರಂಭಿಸಲಾಗಿದೆ. ಹೊರ ರೋಗಿಗಳ ನೊಂದಣಿ ಮತ್ತು ಸೇವೆಗಳನ್ನು ಸುಗಮಗೊಳಿಸಲು ಹೊಸ ಒಪಿಡಿ ಕೌಂಟರ್‌ಗಳನ್ನು ಸ್ಥಾಪಿಸಲಾಗಿದ್ದು, ಆಸ್ಪತ್ರೆಯ ಸ್ವಚ್ಛತೆ ಮತ್ತು ನೈರ್ಮಲ್ಯ ಸುಧಾರಣೆಗೆ ಚರಂಡಿ ವ್ಯವಸ್ಥೆಯ ನವೀಕರಣ ಮಾಡಲಾಗಿದೆ ಎಂದು ತಿಳಿಸಿದರು.
ತುರ್ತು ಸಂದರ್ಭಗಳಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ಹೊಸ ಜನರೇಟರ್ ಅಳವಡಿಸಲಾಗಿದೆ. ಮುಂದಿನ ಹಂತದಲ್ಲಿ ಆಸ್ಪತ್ರೆಯ ಉಳಿದ ಚರಂಡಿ ವ್ಯವಸ್ಥೆ ಸುಧಾರಣೆ, ಕಟ್ಟಡ ಮತ್ತು ಆವರಣದ ಸಮಗ್ರ ನಿರ್ವಹಣೆ, ಕುಡಿಯುವ ನೀರು ಹಾಗೂ ನೈರ್ಮಲ್ಯ ವ್ಯವಸ್ಥೆ ಬಲಪಡಿಸುವುದು, ಅಗತ್ಯ ವೈದ್ಯಕೀಯ ಉಪಕರಣಗಳ ವ್ಯವಸ್ಥೆ ಹಾಗೂ ತಾಯಿ-ಮಕ್ಕಳಿಗೆ ಅನುಕೂಲಕರ ನಿರೀಕ್ಷಣಾ ಪ್ರದೇಶ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ವೈದ್ಯರು, ನರ್ಸಿಂಗ್ ಸಿಬ್ಬಂದಿ ಸೇರಿ ಮಾನವ ಸಂಪನ್ಮೂಲದ ಅಗತ್ಯತೆ, ತುರ್ತು ಚಿಕಿತ್ಸಾ ಸೇವೆಗಳ ಸಾಮರ್ಥ್ಯ ಹಾಗೂ ರೋಗಿಗಳ ಸೇವಾ ವ್ಯವಸ್ಥೆಯ ಬಗ್ಗೆಯೂ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ಅವರು ಹೇಳಿದರು. ತಾಯಿ ಮತ್ತು ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಆಸ್ಪತ್ರೆಯನ್ನು ಇನ್ನಷ್ಟು ಸುಸಜ್ಜಿತಗೊಳಿಸಿ ಸಾರ್ವಜನಿಕರಿಗೆ ಸಮಯೋಚಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ಆಡಳಿತದ ಮೂಲ ಉದ್ದೇಶವಾಗಿದೆ ಎಂದು ಎಂದರು.
"

ಗಿರಿ ಜಿಲ್ಲೆಯ ಪ್ರಮುಖ ಆಸ್ಪತ್ರೆಗಳಲ್ಲಿ ಇದು ಕೂಡ ಒಂದು. ತಾಯಿ ಮತ್ತು ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ ಆರೈಕೆ ಮಾಡಲಾಗುವುದು. ಇನ್ನೂ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಂಬAಧಪಟ್ಟ ಹಿರಿಯ ಅಽಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.| ರಾಹುಲ್ ಪಾಂಡ್ವೆ ಜಿಲ್ಲಾಽಕಾರಿ ಯಾದಗಿರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net