ಮೇ 3 ರಂದು ನೀಟ್ ಪರೀಕ್ಷೆ: ಕೇಂದ್ರಗಳಿಗೆ ಬಿಗಿ ಭದ್ರತೆ ಕಲ್ಪಿಸಿ ಸುಸೂತ್ರವಾಗಿ ನಡಿಸಿ- ಜಿಲ್ಲಾಧಿಕಾರಿ ಬಿ ಪೌಜಿಯಾ ತರುನ್ನುಮ್ ಸೂಚನೆ

 ಸಭೆಯಲ್ಲಿ ಪರೀಕ್ಷೆ ಕೇಂದ್ರದ ಮುಖ್ಯಸ್ಥರು ಹಾಗೂ ಇತರೆ ಅಧಿಕಾರಿಗಳು ಇದ್ದರು.
ಸಭೆಯಲ್ಲಿ ಪರೀಕ್ಷೆ ಕೇಂದ್ರದ ಮುಖ್ಯಸ್ಥರು ಹಾಗೂ ಇತರೆ ಅಧಿಕಾರಿಗಳು ಇದ್ದರು.
Published on
ಕಲಬುರಗಿ: ಕೇಂದ್ರ ಸರ್ಕಾರದ ಎನ್.ಟಿ.ಎ. ಏಜೆನ್ಸಿಯು ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಇದೇ ಮೇ 3 ರಂದು ಕಲಬುರಗಿ ನಗರದ 20 ಕೇಂದ್ರಗಳಲ್ಲಿ ನೀಟ್‌ (NEET)ಪರೀಕ್ಷೆ ನಡೆಸಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರುಗಳಿಗೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರುನ್ನುಮ್ ಸೂಚನೆ ನೀಡಿದರು.
 ಗುರುವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಅಂದು ಮಧ್ಯಾಹ್ನ 2/ರಿಂದ 5 ಗಂಟೆ ವರೆಗೆ ಪರೀಕ್ಷೆ ನಡೆಯಲಿದೆ.
ಜಿಲ್ಲೆಯಲ್ಲಿ ಸುಮಾರು 8,100 ಜನ ವಿದ್ಯಾರ್ಥಿಗಳು ಪರೀಕ್ಷೆ  ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆಗೆ ಬಿಗಿ ಭದ್ರತೆ ಕಲ್ಪಿಸಬೇಕು. ಎಲ್ಲಿಯೂ ನಕಲಿಗೆ ಅವಕಾಶ ನೀಡಬಾರದು ಎಂದರು.
ಪರೀಕ್ಷೆ ಸುಸೂತ್ರ, ನ್ಯಾಯಸಮ್ಮತವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಪ್ರತಿ ಕೇಂದ್ರಕ್ಕೆ ಸಿ.ಸಿ.ಟಿ.ವಿ ನಿಗಾ ಇರಲಿದೆ. ಪರೀಕ್ಷೆಗೆ ಬೇಕಾದ ಎಲ್ಲಾ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. 
 ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಕೇಂದ್ರದ ವೀಕ್ಷಕರನ್ನಾಗಿ  ನೇಮಿಸಿದ್ದು, ಅರ್ಧ ಗಂಟೆ ಮುಂಚೆಯೆ ವೀಕ್ಷಕರು ಕೇಂದ್ರದಲ್ಲಿ ಹಾಜರಾಗಿ ಪಾರದರ್ಶಕವಾಗಿ ಪರೀಕ್ಷೆ ನಡೆಯುವಂತೆ ಮೇಲುಸ್ತುವಾರಿ ವಹಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಮಾತನಾಡಿ ಬೇಸಿಗೆ ಹೆಚ್ಚಿಗೆ ಇರುವುದರಿಂದ ಕುಡಿಯುವ ನೀರಿನ ವ್ಯವಸ್ಥೆ, ಓ.ಆರ್.ಎಸ್ ಪರೀಕ್ಷಾ ಕೇಂದ್ರಗಳಲ್ಲಿ ಇಡುವಂತೆ ಹೇಳಿದರು.
ಪರೀಕ್ಷೆ ದಿನದ ಮುನ್ನವೆ ಕೇಂದ್ರದಲ್ಲಿ ಆಸನ ವ್ಯವಸ್ಥೆ, ವಿದ್ಯುತ್ , ಶೌಚಾಲಯದಂತಹ ಮೂಲಸೌಕರ್ಯ ಇರುವುದನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಖಾತ್ರಿಪಡಿಸಿಕೊಳ್ಳಬೇಕು. ಪ್ರವೇಶ ದ್ವಾರದಲ್ಲಿಯೆ ಪೊಲೀಸ್ ಸಿಬ್ಬಂದಿ ಸಹಾಯ ಪಡೆದು ಅಭ್ಯರ್ಥಿಗಳಿಗೆ ಫ್ರಿಸ್ಕಿಂಗ್ ಮಾಡಬೇಕು. ಇನ್ನು ಪರೀಕ್ಷಾ ಕೇಂದ್ರಕ್ಕೆ‌ ಬರುವ‌ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಐ.ಡಿ ಕಾರ್ಡ್ ತರುವುದನ್ನು ಮರೆಯಬಾರದು ಎಂದಿದ್ದಾರೆ.
ಎಲೆಕ್ಟ್ರಾನಿಕ್ ಸಾಧನಗಳು ನಿಷೇಧ:
ಪರೀಕ್ಷೆ ಕೇಂದ್ರದಲ್ಲಿ ಮೋಬೈಲ್, ಬ್ಲೂಟೂಥ್, ಪೇಜರ್, ಕ್ಯಾಲ್ಕುಲೇಟರ್ ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದಲ್ಲದೆ ಕೇಂದ್ರದಲ್ಲಿ 200 ಮೀಟರ್ ಸುತ್ತ ಪ್ರದೇಶ ನಿಷೇಧಿತ ಪ್ರದೇಶವೆಂದು ಈಗಾಗಲೆ ಘೋಷಿಸಲಾಗಿದ್ದರಿಂದ ಪೊಲೀಸ್ ಇಲಾಖೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಪರೀಕ್ಷೆ ಕೇಂದ್ರದ ಮುಖ್ಯಸ್ಥರು ಹಾಗೂ ಇತರೆ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net