ಬೆಂಗಳೂರಿಗೆ ಕಾಲಿಟ್ಟ NEET ಕಿಚ್ಚು: ಕೆಪಿಸಿಸಿ ಕಚೇರಿ ಮುತ್ತಿಗೆಗೆ ಯತ್ನ; ಕಾಂಗ್ರೆಸ್ ಕಾರ್ಯಕರ್ತರಿಂದ BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ! B P Harish Attacked
ಕೆಪಿಸಿಸಿ ಕಚೇರಿ ಮುಂದೆ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಬೆಂಗಳೂರಿಗೂ ಹಬ್ಬಿದ NEET ಅಕ್ರಮದ ಬಿಸಿ!
ಕೆಪಿಸಿಸಿ ಕಚೇರಿ ಮುತ್ತಿಗೆಗೆ ಬಿಜೆಪಿ ಯೋಜನೆ
ಕೆಪಿಸಿಸಿ ಕಚೇರಿ ಮುಂದೆ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಾರಂಭವಾಗಿದ್ದ ನೀಟ್ ಅಕ್ರಮ ಹೋರಾಟದ ಕಿಚ್ಚು ಈಗ ಕರ್ನಾಟಕವನ್ನು ತಲುಪಿದ್ದು, ಕೆಪಿಸಿಸಿ ಕಚೇರಿ ಮುಂದೆ ನಿಂತಿದ್ದ ದಾವಣಗೆರೆ ಬಿಜೆಪಿ ಶಾಸಕ ಬಿ.ಪಿ. ಹರೀಶ್ (B P Harish Attacked) ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿರುವ ಘಟನೆ ಬುಧವಾರ (ಜು.22) ವರದಿಯಾಗಿದೆ.
ಈ ಘಟನೆಯಿಂದ ಕೆರಳಿರುವ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ಕೂಡಲೇ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಈ ಘಟನೆಗೆ ಕುರಿತಂತೆ ಮಾಧ್ಯಮಗಳ ಮುಂದೆ ಮಾತನಾಡಿರುವ ಹರಿಹರ ಶಾಸಕ ಬಿ.ಪಿ. ಹರೀಶ್ ನಾವು ಪ್ರತಿಭಟನೆ ನಡೆಸುತ್ತಿದ್ದಾಗ, ಏಕಾಏಕಿ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದು, ನನ್ನ ಮೇಲೆ ಮೊಟ್ಟೆ ಎಸೆದಿದ್ದಾರೆ. ಕೇವಲ ಮೊಟ್ಟೆ ಅಷ್ಟೇ ಅಲ್ಲದೇ ಕೈಯಿಂದ ಕೂಡ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು!
ಕೆಪಿಸಿಸಿ ಕಚೇರಿಯನ್ನು ಮುತ್ತಿಗೆ ಹಾಕಲು ಆರ್. ಅಶೋಕ್ ನೇತೃತ್ವದಲ್ಲಿ ಮುಂದಾಗಿದ್ದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮಾರಾಮಾರಿ ನಡೆದಿದ್ದು, ಶಾಸಕ ಬಿ.ಪಿ. ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ.
ಕೂಡಲೇ ಜಾಗ್ರತರಾದ ಪೊಲೀಸ್ ಸಿಬ್ಬಂದಿ ಹರೀಶ್ ಅವರನ್ನು ಪಕ್ಕದ ಗಲ್ಲಿ ಮೂಲಕ ಉದ್ವಿಗ್ನ ಸ್ಥಳದಿಂದ ಸುರಕ್ಚಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಹಾಗೆಯೇ ಕೆಪಿಸಿಸಿ ಕಚೇರಿ ಮುತ್ತಿಗೆಗೆ ಯತ್ನಿಸಿದ್ದ ಆರ್. ಅಶೋಕ್ ಸೇರಿದಂತೆ ರಾಜ್ಯ ಬಿಜೆಪಿ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.