ನವಜಾತ ಶಿಶುವಿನ ಮೃತದೇಹ ಪತ್ತೆ

Newborn baby's body found
Newborn baby's body found
Published on

ದೊಡ್ಡಬಳ್ಳಾಪುರ:

ನಗರದ ರೈಲು ನಿಲ್ದಾಣ ಸಮೀಪದ ಆಂಜನೇಯ ದೇವಾಲಯ ಪಕ್ಕದಲ್ಲಿ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದೆ.

ಅಪರಿಚಿತರು ಮೃತದೇಹ ತಂದು ಹೂತುಹಾಕಿರುವ ಶಂಕೆ ವ್ಯಕ್ತವಾಗಿದೆ, ಪ್ರಾಣಿಗಳು ಮಣ್ಣು ತೋಡಿದ ಪರಿಣಾಮ ದೇಹ ಮೇಲಕ್ಕೆ ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಪಾಂಡುರಂಗ, ನಗರ ಠಾಣೆ ಇನ್​ಸ್ಪೆಕ್ಟರ್​ ಮುತ್ತುರಾಜ್​, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಸ್ಥಳ ಪರಿಶೀಲಿಸಿದರು.
ಶಿಶುವಿನ ತಾಯಿ ಯಾರು?, ಯಾವ ಸಂದರ್ಭದಲ್ಲಿ ಮಗುವನ್ನು ಹೂತುಹಾಕಿದ್ದಾರೆ ಎಂಬುದು ತಿಳಿದುಬಂದಿಲ್ಲ. ಆರೋಪಿಗಳ ಸುಳಿವು ಪತ್ತೆಹಚ್ಚುವ ನಿಟ್ಟಿನಲ್ಲಿ ಸುತ್ತಮುತ್ತಲಿನ ಸಿಸಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಶಿಶುವಿನ ಮೃತದೇಹವನ್ನು ಮರಣೋತ್ತರ ಪರೀೆಗೆ ರವಾನಿಸಲಾಗಿದೆ. ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net