ನೈಸ್ ನಮ್ಮ ಕೂಸೇ, ಆದ್ರೆ ಸೂಲಗಿತ್ತಿ ಯಾರು..? ಸಿಎಂ ವಿರುದ್ಧ ಎಚ್‌ಡಿಕೆ ವಾಗ್ದಾಳಿ: ಸ್ಟಿಂಗ್​ ಆಪರೇಷನ್ ಬಗ್ಗೆಯೂ ಗಂಭೀರ ಆರೋಪ! | HD Kumarswamy

ಬೆಂಗಳೂರು: ನೈಸ್ (NICE) ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೋರಾಟವು ಈಗ ತಾರ್ಕಿಕ ಅಂತ್ಯದ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.
ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ
ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ
Published on: 

ಬೆಂಗಳೂರು: ನೈಸ್ (NICE) ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೋರಾಟವು ಈಗ ತಾರ್ಕಿಕ ಅಂತ್ಯದ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.

ಜೆ.ಪಿ. ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್​​ಡಿಕೆ, ನೈಸ್ ಯೋಜನೆ ದೇವೇಗೌಡರ ಕೂಸು ಎಂದು ಹೇಳಿರುವ ಮುಖ್ಯಮಂತ್ರಿಗಳಿಗೆ ತಿರುಗೇಟು ನೀಡಿರುವ ದೊಡ್ಡಗೌಡರು, ಇದು ನಮ್ಮ ಕೂಸೇ ಆದರೂ, ಅದರ ಸೂಲಗಿತ್ತಿ ಯಾರು? ಎಂದು ನೇರ ಪ್ರಶ್ನೆ ಹಾಕಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸ್ಪಷ್ಟ ಉತ್ತರ ನೀಡಬೇಕು ಎಂದು ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.

2002ರ ನವೆಂಬರ್ 4 ರಂದು ನೈಸ್ ಒಪ್ಪಂದ ಸಂಪುಟದಲ್ಲಿ ಆಯ್ಕೆಯಾಗಿತ್ತು ಎಂಬುದನ್ನು ನೆನಪಿಸಿದ ಅವರು, ಯೋಜನೆಗೆ ನಿಗದಿಗಿಂತ ಹೆಚ್ಚು ಭೂಮಿ ಪಡೆದಿದ್ದಾರೆ ಆದರೆ ಈ ಬಗ್ಗೆ ಮುಖ್ಯಮಂತ್ರಿಗಳು ಯಾವುದೇ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿದರು.

ಟೋಲ್ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವರು, 2008ರಿಂದ ಅಕ್ರಮವಾಗಿ ಟೋಲ್ ಸಂಗ್ರಹ ಮಾಡಲಾಗುತ್ತಿದ್ದು, ಮೂರು ಸೆಕ್ಷನ್‌ಗಳಲ್ಲಿ ಟೋಲ್ ಸಂಗ್ರಹ ಆಗುತ್ತಿದೆ. ಕಳೆದ ಜುಲೈನಲ್ಲಿ ಉಚ್ಚ ನ್ಯಾಯಾಲಯದ ಆದೇಶದಲ್ಲಿ ಟೋಲ್ ಕಟ್ಟಬೇಡಿ ಎಂದು ಹೇಳಿದೆ ಎಂದರು. ನೈಸ್ ಒಪ್ಪಂದದ ಬಗ್ಗೆ ಕೆಲವು ಮಾರ್ಪಾಟುಗಳನ್ನು ಮಾಡಿ ಒಡಿಪಿ (ODP) ಪ್ಲ್ಯಾನ್ ಬದಲಾವಣೆ ಮಾಡಲಾಯಿತು. ಈ ಬಗ್ಗೆ ಉಚ್ಚ ನ್ಯಾಯಾಲಯ ನೀಡಿರುವ ಆದೇಶದ ಕುರಿತು ಮತ್ತು ಫ್ರೇಮ್ ವರ್ಕ್ ಒಪ್ಪಂದದ ಬಗ್ಗೆ ಸಿಎಂ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.

ಸ್ಟಿಂಗ್​ ಆಪರೇಷನ್ ಬಗ್ಗೆ ಎಚ್​​ಡಿಕೆ ಹೇಳಿದ್ದೇನು..?

ಕಾಂಗ್ರೆಸ್ ಸರ್ಕಾರದ ಆಂತರಿಕ ರಾಜಕೀಯದ ಬಗ್ಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಹೈಕಮಾಂಡ್‌ಗೆ ಸ್ಟಿಂಗ್ ಆಪರೇಷನ್ ವರದಿ ನೀಡಿಯೇ ಸಿದ್ದರಾಮಯ್ಯನವರನ್ನು ಇಳಿಸಿ, ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿದ್ದಾರೆ ಎನ್ನುವುದನ್ನು ಅವರ ಪಕ್ಷದ ನಾಯಕರೇ ಹೇಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಮುಖ್ಯಮಂತ್ರಿಗಳಿಗೆ ತಮ್ಮದೇ ಸಚಿವರ ಮೇಲೆ ವಿಶ್ವಾಸವಿಲ್ಲದಿರುವ ಕಾರಣವೇ ಸಂಪುಟ ಸಭೆಯಲ್ಲಿ ಈ ಸ್ಟಿಂಗ್ ಆಪರೇಷನ್ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಅವರು ಕಿಡಿಕಾರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net