ಕಿರಾಣಿ, ಪಾನ್ ಶಾಪ್‌ಗಳಲ್ಲಿ ಮದ್ಯ ಮಾರಾಟ ಬೇಡ!

ಕುಷ್ಟಗಿ ತಾಲೂಕಿನ ಹಿರೇಬನ್ನಿಗೋಳ ಗ್ರಾಮಕ್ಕೆ ಸಿಪಿಐ ವಿಶ್ವನಾಥ್ ಹಿರೇಗೌಡ್ರ ಶುಕ್ರವಾರ ಭೇಟಿ ನೀಡಿ ಗ್ರಾಮದಲ್ಲಿ ಮದ್ಯ ಅಕ್ರಮವಾಗಿ ಮಾರಾಟ ಮಾಡದಂತೆ ಗ್ರಾಮಸ್ಥರಿಗೆ ಸೂಚನೆ ನೀಡಿದರು.
ಕುಷ್ಟಗಿ ತಾಲೂಕಿನ ಹಿರೇಬನ್ನಿಗೋಳ ಗ್ರಾಮಕ್ಕೆ ಸಿಪಿಐ ವಿಶ್ವನಾಥ್ ಹಿರೇಗೌಡ್ರ ಶುಕ್ರವಾರ ಭೇಟಿ ನೀಡಿ ಗ್ರಾಮದಲ್ಲಿ ಮದ್ಯ ಅಕ್ರಮವಾಗಿ ಮಾರಾಟ ಮಾಡದಂತೆ ಗ್ರಾಮಸ್ಥರಿಗೆ ಸೂಚನೆ ನೀಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಮದ್ಯ ಅಕ್ರಮ ಮಾರಾಟ ತಡೆಗೆ ಕ್ರಮ
  • ಬಾಹಿರ ಚಟುವಟಿಕೆಯಲ್ಲಿ ನಿರತರಾದರೂ ಕಾನೂನು ಕ್ರಮ
ಕುಷ್ಟಗಿ: ತಾಲೂಕಿನ ಹಿರೇಬನ್ನಿಗೋಳ ಗ್ರಾಮಕ್ಕೆ ಸಿಪಿಐ ವಿಶ್ವನಾಥ್ ಹಿರೇಗೌಡ್ರ ಶುಕ್ರವಾರ ದಿಢೀರ್ ಭೇಟಿ ಮದ್ಯ ಅಕ್ರಮ ಮಾರಾಟ ಕುರಿತು ಪರಿಶೀಲನೆ ನಡೆಸಿದರು. 
ಬಳಿಕ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ, ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ ಮಾಡುವುದು ಗಮನಕ್ಕೆ ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗವುದು. ಮದ್ಯ ಸೇವನೆಯಿಂದ ಯುವಕರು ಬಲಿಯಾಗುತ್ತಿರವುದು ವಿಪರ್ಯಾಸ. 
ಯಾರೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ನಿರತರಾದರೂ ಮುಲಾಜಿಲ್ಲದೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. 
ಒಂದು ವೇಳೆ ದಾಳಿ ನಡೆದ ಸಂದರ್ಭದಲ್ಲಿ ಮದ್ಯ ಅಕ್ರಮ ಮಾರಾಟ ಮಾಡುವುದು ಕಂಡು ಬಂದರೆ 2 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.  
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net