

ಪ್ರಮುಖ ಮುಖ್ಯಾಂಶಗಳು
ಪ್ರಕರಣದ ಹಿನ್ನೆಲೆ
ಚಿಕ್ಕಮಗಳೂರಿನ ಸಭೆಯೊಂದರಲ್ಲಿ ಮಾತನಾಡಿದ ಸಿ.ಟಿ. ರವಿ, ನೀಟ್ ಪ್ರತಿಭಟನೆಯಲ್ಲಿ ಮುಸ್ಲಿಂ ಧರ್ಮಗುರುಗಳ ಪಾತ್ರವೇನು ಎಂದು ಪ್ರಶ್ನಿಸಿದ್ದರು. ಈ ವೇಳೆ ಧರ್ಮಗುರುಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಚಿಕ್ಕಮಗಳೂರು ಜಾಮಿಯಾ ಮಸೀದಿ ಅಧ್ಯಕ್ಷ ಮುದಸ್ಸಿರ್ ಪಾಷಾ ಎಂಬುವರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಸಿ.ಟಿ. ರವಿ ಅವರ ನಿವಾಸಕ್ಕೆ ತೆರಳಿದ್ದರು. ಆದರೆ, ಅದನ್ನು ಸ್ವೀಕರಿಸಲು ನಿರಾಕರಿಸಿದ್ದ ಅವರು, ನನ್ನ ಭಾಷಣದಲ್ಲಿ ಯಾವುದೇ ಧರ್ಮದ ಹೆಸರು ಉಲ್ಲೇಖಿಸಿಲ್ಲ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದವರ ವಿರುದ್ಧ ಮಾತನಾಡಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದರು.