ಯಾರಿಂದಲೂ ಹಕ್ಕು ಉಲ್ಲಂಘನೆಯಾಗದಿರಲಿ

ವಿರಾಜಪೇಟೆಯ ಪುರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ  ನಟರಾಜ್ ಮಾತನಾಡಿದರು. ಕೆ.ವಿಮಲಾ, ರಾಜೇಶ್, ಅನುಪಮಾ, ಪ್ರಮೋದ್, ಪ್ರವೀನ್‌ಕುಮಾರ್ ಇದ್ದರು.
ವಿರಾಜಪೇಟೆಯ ಪುರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನಟರಾಜ್ ಮಾತನಾಡಿದರು. ಕೆ.ವಿಮಲಾ, ರಾಜೇಶ್, ಅನುಪಮಾ, ಪ್ರಮೋದ್, ಪ್ರವೀನ್‌ಕುಮಾರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನಟರಾಜ್
  • ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಅಂಗವಿಜಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
ವಿರಾಜಪೇಟೆ : ಕಾನೂನು ಪಾಲನೆ ಹಾಗೂ ಅರಿವು ಪ್ರತಿಯೊಬ್ಬ ಪ್ರಜೆಗೂ ಅತ್ಯಗತ್ಯ ಎಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನಟರಾಜ್ ಅಭಿಪ್ರಾಯಪಟ್ಟರು.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಅಂಗವಿಜಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಹಿರಿಯ ನಾಗರಿಕರ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ಪುರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾನೂನನ್ನು ಪ್ರತಿ ಪ್ರಜೆಯೂ ಪಾಲನೆ ಮಾಡುತ್ತಿದ್ದು, ಇದು ಪ್ರಜೆಗಳ ಕರ್ತವ್ಯವೂ ಹೌದು. ಕಾನೂನು ಬೆನ್ನ ಹಿಂದೆ ಬರುವ ನೆರಳಿನಂತೆ ಪ್ರತಿಯೊಬ್ಬರಿಗೂ ಅವಶ್ಯಕ. ಸಂವಿಧಾನದ ಆಶಯ ಗೌರವಿಸಿ ಅದಕ್ಕೆ ತಕ್ಕಂತೆ ಜೀವನ ನಡೆಸುವುದು ಪ್ರತಿಯೊಬ್ಬರ ಕರ್ತವ್ಯ. ಅಂತೆಯೇ ಹಕ್ಕುಗಳ ಅರಿವೂ ಇರಬೇಕು. ಹಕ್ಕುಗಳನ್ನು ಯೂರೂ ಉಲ್ಲಂಘನೆ ಮಾಡಬಾರದು ಎಂದರು.
ಹಿರಿಯ ನಾಗರಿಕರನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಯುವ ಪೀಳಿಗೆಗೆ ಮನೆಯಿಂದಲೇ ಸಂಸ್ಕಾರ ಕಲಿಸಬೇಕು. ಇವೆಲ್ಲವೂ ಸಾಧ್ಯವಾಗಬೇಕಾದರೆ ಯುವ ಸಮೂಹಕ್ಕೆ ಕಾನೂನಿನ ಅರಿವು ಹಾಗೂ ಹಿರಿಯ ನಾಗರಿಕರನ್ನು ಗೌರವಿಸುವ ಬಗ್ಗೆ ತಿಳಿ ಹೇಳಬೇಕಾದ ಅವಶ್ಯಕತೆ ಇದೆ ಎಂದರು.
ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಮುಲ್ಲೆಂಗಡ ಶಂಕರಿ ಪೊನ್ನಪ್ಪ ಮಾತನಾಡಿ, ಹಿರಿಯ ನಾಗರಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಅರಿವು ಮೂಡಿಸಬೇಕು. ಜತೆಗೆ ಕಚೇರಿಗಳಲ್ಲಿ ಅವರ ಕೆಲಸವನ್ನು ಶೀಘ್ರವಾಗಿ ಮಾಡಿಕೊಡುವ ವ್ಯವಸ್ಥೆ ಆಗಬೇಕು. ಸಮಸ್ಯೆಗಳ ಇತ್ಯರ್ಥಕ್ಕೆ ಎಲ್ಲರೂ ಸೇರಿ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಹೇಳಿದರು.
ತಹಸೀಲ್ದಾರ್ ಪಿ.ಸಿ.ಪ್ರವೀಣ್‌ಕುಮಾರ್ ಮಾತನಾಡಿ, ಜಿಲ್ಲೆಯು ಸಂಪ್ರದಾಯಕ್ಕೆ ಹೆಸರುವಾಸಿಯಾಗಿದ್ದು, ಗುರು-ಹಿರಿಯರನ್ನು ಗೌರವದಿಂದ ಕಾಣುವ ಸಂಪ್ರದಾಯ ಜಿಲ್ಲೆಯಲ್ಲಿದೆ. ಹಿರಿಯ ನಾಗರಿಕರು ನಮಗೆ ಸಿಕ್ಕಾಗ ಅವರನ್ನು ಸೌಜನ್ಯದಿಂದ ಮಾತನಾಡಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಅವರ ಕೆಲಸ ಕಾರ್ಯಗಳನ್ನು ಶೀಘ್ರವಾಗಿ ಮಾಡುವಂತಾಗಬೇಕು ಎಂದ ಅವರು, ಕಾನೂನಿನ ಜ್ಞಾನವನ್ನು ನಾವು ಪಡೆದರೂ ಸಾಲದು ಎಂದರು.
ವಕೀಲರಾದ ಬಿ.ಕೆ.ಅನುಪಮಾ ಹಾಗೂ ಪ್ರಮೋದ್ ಉಪನ್ಯಾಸವನ್ನು ನೀಡಿದರು. ವಿರಾಜಪೇಟೆ ತಾಲೂಕು ಪಂಚಾಯಿತಿ ಇಒ ರಾಜೇಶ್, ಪೊನ್ನಂಪೇಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಎ.ಪೂಣಚ್ಚ, ವಿರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಸಿ.ಕೆ.ಪೂವಣ್ಣ , ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಕೆ.ವಿಮಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಬಿ.ಸುಮಂಗಲಾ, ಗ್ರೇಡ್ 2 ತಹಸೀಲ್ದಾರ್ ಪ್ರದೀಪ್‌ಕುಮಾರ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net