ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಅನುಮತಿ ಬೇಡ

ಬಸವಕಲ್ಯಾಣದಲ್ಲಿ ಆಯೋಜಿಸಿರುವ ಬಸವಾದಿ ಶರಣರ ಹಿಂದೂ ಸಮಾವೇಶ ರದ್ದುಪಡಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಆವರಣದಲ್ಲಿ ಬಸವಪರ  ಸಂಘಟನೆಗಳ ಒಕ್ಕೂಟದಿಂದ ಮನವಿ ಸಲ್ಲಿಸಲಾಯಿತು. ಬಸವರಾಜ ರೊಟ್ಟಿ, ಅಶೋಕ ಮಳಗಲಿ ಇತರರಿದ್ದರು.
ಬಸವಕಲ್ಯಾಣದಲ್ಲಿ ಆಯೋಜಿಸಿರುವ ಬಸವಾದಿ ಶರಣರ ಹಿಂದೂ ಸಮಾವೇಶ ರದ್ದುಪಡಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಆವರಣದಲ್ಲಿ ಬಸವಪರ ಸಂಘಟನೆಗಳ ಒಕ್ಕೂಟದಿಂದ ಮನವಿ ಸಲ್ಲಿಸಲಾಯಿತು. ಬಸವರಾಜ ರೊಟ್ಟಿ, ಅಶೋಕ ಮಳಗಲಿ ಇತರರಿದ್ದರು.
Published on
ಬೆಳಗಾವಿ: ಬಸವಕಲ್ಯಾಣದಲ್ಲಿ ಜೂ.28ರಂದು ನಡೆಸಲು ಉದ್ದೇಶಿಸಿರುವ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಬಸವಪರ ಸಂಘಟನೆಗಳ ಒಕ್ಕೂಟ ಬುಧವಾರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಕನ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಲಿಂಗಾಯತ ಸಮಾಜ, ಬಸವಾದಿ ಶರಣರು ಹಾಗೂ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕಾಡಸಿದ್ಧೇಶ್ವರ ಸ್ವಾಮೀಜಿ ಬಸವಕಲ್ಯಾಣದಲ್ಲಿ ಸಮಾವೇಶ ಆಯೋಜಿಸುವುದು ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗಬಹುದು. ಬಸವಣ್ಣನವರ ಕಾರ್ಯಕ್ಷೇತ್ರವಾಗಿದ್ದ ಬಸವಕಲ್ಯಾಣ ಅನುಭವ ಮಂಟಪದ ನೆಲೆಯಾಗಿದೆ.
ಅಲ್ಲಿ ನಡೆಯಲಿರುವ ಸಮಾವೇಶ ಬಸವ ತತ್ತ್ವಗಳಿಗೆ ವಿರುದ್ಧವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಕಾರ್ಯಕ್ರಮದಿಂದ ಸೌಹಾರ್ದಕ್ಕೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ಅನುಮತಿ ನೀಡಬಾರದು ಎಂದು ಒತ್ತಾಯಿಸಲಾಗಿದೆ.
ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ, ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಜಿ.ಸಿದ್ನಾಳ, ಪ್ರಧಾನ ಕಾರ್ಯದರ್ಶಿ ಅಶೋಕ ಮಳಗಲಿ, ರಾಷ್ಟ್ರೀಯ ಬಸವದಳ, ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘ, ಬಸವಪರ ಸಂಘಟನೆಗಳ ಪದಾಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net