

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು:
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹಮ್ಮಿಕೊಂಡಿರುವ ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪಾದಚಾರಿಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸುವುದು ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಸ್ವತಃ ವಾದ ಮಂಡಿಸಿದ ಅರ್ಜಿದಾರರು, ಜಿಬಿಎ ಈ ಅಭಿಯಾನವನ್ನು ಅವೈಜ್ಞಾನಿಕವಾಗಿ ಮಾಡುತ್ತಿದೆ. ಕಾರ್ಯಾಚರಣೆಯ ವ್ಯಾಪ್ತಿಯ ಬಗ್ಗೆ ಸ್ಪಷ್ಟಪಡಿಸಲಾಗಿಲ್ಲ. ಫುಟ್ಪಾತ್ ತೆರವುಗೊಳಿಸುವ ವಿಧಾನ ಮತ್ತು ತೆರವುಗೊಳಿಸಿದ ನಂತರದ ನಿರ್ವಹಣೆಯ ವಿಷಯಗಳು ಗೊಂದಲಮಯವಾಗಿದೆ ಎಂದರು. ಆಗ ಪ್ರತಿಕ್ರಿಯಿಸಿದ ನ್ಯಾಯಪೀಠ, ಫುಟ್ಪಾತ್ ಅತಿಕ್ರಮಣ ತೆರವುಗೊಳಿಸುವ ಮೂಲಕ ಪಾದಚಾರಿಗಳಿಗೆ ಸುಲಭವಾಗಿ ಓಡಾಡಲು ಸ್ಥಳಾವಕಾಶ ಕಲ್ಪಿಸಬೇಕು ಎಂದು ಮಾತ್ರ ಸರ್ಕಾರದ ಆದೇಶ ಹೇಳುತ್ತದೆ ಎಂದು ತಿಳಿಸಿತು.
ಸರ್ಕಾರಕ್ಕೆ ನೋಟಿಸ್ ಜಾರಿ: