ಕಡ್ಡಾಯವಾಗಿ ಸಂಚಾರಿ ನಿಯಮ ಪಾಲಿಸಿ meeting

ಕೆಜಿಎಫ್​ meeting ತಾಲೂಕಿನ ಬೇತಮಂಗಲದ ಬಸ್​ ನಿಲ್ದಾಣದಲ್ಲಿ ಪೊಲೀಸ್​ ಇಲಾಖೆಯಿಂದ ಹಮ್ಮಿಕೊಂಡಿದ್ದ ಜನ ಸಂಪರ್ಕ ಸಭೆಯಲ್ಲಿ ಆರಕ್ಷಕ ಉಪ ನಿರೀಕ್ಷಕರಾದ ದಿಂಬಾ ನಾರಾಯಣಸ್ವಾಮಿ, ನವೀನ್​ ಇದ್ದರು.
ಕೆಜಿಎಫ್​ meeting ತಾಲೂಕಿನ ಬೇತಮಂಗಲದ ಬಸ್​ ನಿಲ್ದಾಣದಲ್ಲಿ ಪೊಲೀಸ್​ ಇಲಾಖೆಯಿಂದ ಹಮ್ಮಿಕೊಂಡಿದ್ದ ಜನ ಸಂಪರ್ಕ ಸಭೆಯಲ್ಲಿ ಆರಕ್ಷಕ ಉಪ ನಿರೀಕ್ಷಕರಾದ ದಿಂಬಾ ನಾರಾಯಣಸ್ವಾಮಿ, ನವೀನ್​ ಇದ್ದರು.
Published on
ಬೇತಮಂಗಲ: ಪ್ರತಿಯೊಬ್ಬ ವಾಹನ ಸವಾರರು ಕಡ್ಡಾಯವಾಗಿ meeting ಚಾಲನಾ ಪರವಾನಗಿ ಮತ್ತು ಇನ್ಶೂರೆನ್ಸ್​ ಹೊಂದಿರಬೇಕು ಹಾಗೂ ಹೆಲ್ಮೆಟ್​ ಧರಿಸುವ ಮೂಲಕ ಸಂಚಾರಿ ನಿಯಮಗಳನ್ನು ಪಾಲಿಸಬೇಕು ಎಂದು ವೃತ್ತ ನಿರೀಕ್ಷಕ ರಂಗಾಶಾಮಯ್ಯ ತಿಳಿಸಿದರು.
ಕೆಜಿಎಫ್​ ತಾಲೂಕು ಬೇತಮಂಗಲದ ಬಸ್​ ನಿಲ್ದಾಣದಲ್ಲಿ ಪೊಲೀಸ್​ ಇಲಾಖೆಯಿಂದ ಹಮ್ಮಿಕೊಂಡಿದ್ದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿ, ಕಳೆದ ಒಂದು ವಾರದಲ್ಲಿ ಬೇತಮಂಗಲ ಪೊಲೀಸ್​ ಮಿತಿ ಒಳಗೆ ಆರು ಅಪಘಾತ ಪ್ರಕರಣ ಸಂಭವಿಸಿದ್ದು, 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಗಾಂಜಾ ಮಾರಾಟ ಮತ್ತು ಐಪಿಎಲ್​ ಬೆಟ್ಟಿಂಗ್​ನಂತಹ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಮತ್ತು ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಭರವಸೆ ನೀಡಿದರು.
ಆಟೋ ಚಾಲಕರ ಸಂಘದ ಮುಖಂಡ ಜೆ.ಜಿ. ಶ್ರೀನಿವಾಸ್​ ಮೂರ್ತಿ ಮಾತನಾಡಿ, ಗ್ರಾಮದಲ್ಲಿ ತುರ್ತು ಸೇವೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿರುವ ಆಟೋ ಚಾಲಕರಿಗೆ ಸರಿಯಾದ ನಿಲ್ದಾಣ ಇಲ್ಲದೇ ಇರುವುದು ದೊಡ್ಡ ಸಮಸ್ಯೆಯಾಗಿದೆ. ಆದ್ದರಿಂದ ಪೊಲೀಸರು ಈ ಕೂಡಲೇ ಹಳೆಯ ಮದ್ರಾಸ್​ ರಸ್ತೆಯಲ್ಲಿ ಆಟೋ ನಿಲ್ದಾಣಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು.
ಆರಕ್ಷಕ ಉಪ ನಿರೀಕ್ಷಕ ತ್ಯಾಗರಾಜ್​ ಮಾತನಾಡಿ, ಪಟ್ಟಣದ ಗಡಿ ಭಾಗಗಳಲ್ಲಿ ನಡೆಯುವ ಗಲಾಟೆಗಳ ಬಗ್ಗೆ ಈಗಾಗಲೇ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಪಟ್ಟಣದ ಸುರಕ್ಷತೆಯ ದೃಷ್ಟಿಯಿಂದ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳ ಮೂಲಕ ಸೈಬರ್​ ಅಪರಾಧ ಮತ್ತು ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಪಾಲಕರು ಮಕ್ಕಳ ಮೊಬೈಲ್​ ಬಳಕೆಯ ಬಗ್ಗೆ ಎಚ್ಚರ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಯಾವುದೇ ತುರ್ತು ಸಂದರ್ಭದಲ್ಲಿ ಸಾರ್ವಜನಿಕರು 112 ಸಂಖ್ಯೆಗೆ ಕರೆ ಮಾಡುವ ಮೂಲಕ ಪೊಲೀಸ್​ ನೆರವು ಪಡೆಯಬಹುದು ಎಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net