ಮಹಾರಂಗ ಸಾಂಸ್ಕೃತಿಕ ವೇದಿಕೆಯ ಮಟ್ಟನವಿಲೆ ಮಕ್ಕಳ ತಂಡದಿಂದ ಅಂದು ಸಂಜೆ ದೇವನೂರು ಮಹದೇವ ವಿರಚಿತ ಒಡಲಾಟ ನಾಟಕದ ಪ್ರದರ್ಶನ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಶಾಸಕ ಸಿ.ಎನ್.ಬಾಲಕೃಷ್ಣ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ತಹಸೀಲ್ದಾರ್ ಜಿ.ಎಸ್.ಶಂಕರಪ್ಪ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಿ.ಆರ್.ಹರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಚ್.ಸತೀಶ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಎನ್.ಅನಿಲ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಡಿ.ಆರ್.ತ್ಯಾಗರಾಜ್, ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಅಧ್ಯಕ್ಷ ಹಡೇನಹಳ್ಳಿ ಲೋಕೇಶ್, ಪರಿಸರವಾದಿ ಚ.ನಾ. ಅಶೋಕ್ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.