ಅಧಿಕಾರಿಗಳ ಕಾರ್ಯವೈಖರಿ

Officers' performance
Officers' performance
Published on
ವಿಜಯವಾಣಿ ಸುದ್ದಿಜಾಲ ಕೊರಟಗೆರೆ
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ಕೆ ಮಂಗಳವಾರ ಅಧಿಕೃತ ಚಾಲನೆ ದೊರೆಯಿತು.
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ 6 ಹೋಬಳಿ, 386 ಗ್ರಾಮ, 240 ಮತಗಟ್ಟೆಗಳು ಹಾಗೂ ಒಟ್ಟು 2,09,945 ಮತದಾರರು ಇದ್ದಾರೆ. ಪ್ರತಿ ಮತಗಟ್ಟೆಗೆ ಒಬ್ಬರಂತೆ 240 ಬೂತ್​ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಅಭಿಯಾನದ ಪ್ರಯುಕ್ತ ಬೂತ್​ ಮಟ್ಟದ ಅಧಿಕಾರಿಗಳು, ತಾಲೂಕು ಹಾಗೂ ಹೋಬಳಿ ನೋಡಲ್​ ಅಧಿಕಾರಿಗಳೊಂದಿಗೆ ಮನೆ-ಮನೆಗೆ ಭೇಟಿ ನೀಡಿ ಮತದಾರರ ಹೆಸರು, ವಿಳಾಸ, ಫೋಟೋ ಹಾಗೂ ಇತರ ವಿವರಗಳನ್ನು ಪರಿಶೀಲಿಸಲಿದ್ದಾರೆ.
ಈ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಲು ತುಮಕೂರು ಜಿಲ್ಲಾ ನೋಂದಣಾಧಿಕಾರಿ ಡಿ.ಆರ್​.ವಿಜಯಲಕ್ಷಿ$್ಮ , ಕೃಷಿ ಇಲಾಖೆ ಉಪನಿರ್ದೇಶಕ ಡಾ.ಚಂದ್ರಕುಮಾರ್​, ಕೊರಟಗೆರೆ ತಹಸೀಲ್ದಾರ್​ ಕೆ.ಮಂಜುನಾಥ್​, ಪುರಸಭೆ ಮುಖ್ಯಾಧಿಕಾರಿ ಉಮೇಶ್​, ಕಸಬಾ ಹೋಬಳಿ ಆರ್​ಐ ಬಸವರಾಜು ಹಾಗೂ ಗ್ರಾಮ ಆಡಳಿತಾಧಿಕಾರಿ ಪವನ್​ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೂತ್​ಮಟ್ಟದ ಅಧಿಕಾರಿಗಳ ಕಾರ್ಯವೈಖರಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿದೆ. ಒಬ್ಬ ಅರ್ಹ ಮತದಾರನೂ ಪಟ್ಟಿಯಿಂದ ಹೊರಗುಳಿಯಬಾರದು ಹಾಗೂ ಅನರ್ಹ ಅಥವಾ ನಕಲಿ ಹೆಸರು ಸೇರ್ಪಡೆಯಾಗಬಾರದು. ಈ ಅಭಿಯಾನದ ಮೂಲಕ ಶೇ.100ರಷ್ಟು ನಿಖರ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಗುರಿ ಹೊಂದಿದ್ದೇವೆ. ಬಿಎಲ್​ಒಗಳು ಪ್ರತಿ ಮನೆಗೂ ಭೇಟಿ ನೀಡಿ ಮಾಹಿತಿಯನ್ನು ಖಚಿತಪಡಿಸಿ ಕೊಳ್ಳಲಿದ್ದಾರೆ ಎಂದು ತಿಳಿಸಿದರು.
30 ಕೆಆರ್​ಟಿ 01
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯದ ಪ್ರಗತಿಯನ್ನು ನೋಂದಣಾಧಿಕಾರಿ ವಿಜಯಲಕ್ಷಿ$್ಮ ಪರಿಶೀಲಿಸಿದರು. ಕೃಷಿ ಇಲಾಖೆ ಉಪನಿರ್ದೇಶಕ ಡಾ.ಚಂದ್ರಕುಮಾರ್​, ತಹಸೀಲ್ದಾರ್​ ಕೆ.ಮಂಜುನಾಥ್​ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net