Officials should take measures to identify ineligible beneficiaries of the Gruha Lakshmi scheme.
Published on:
Copied
Follow Us
ಶಿಡ್ಲಘಟ್ಟ :ಗೃಹಲ್ಮ ಯೋಜನೆಯಡಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಅನುದಾನ ದುರುಪಯೋಗವಾಗದಂತೆ ನೋಡಿಕೊಳ್ಳುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ಮುನಿಯಪ್ಪ ಹೇಳಿದರು.
ತಾಲೂಕು ಪಂಚಾಯಿತಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಗೃಹಲ್ಮ ಯೋಜನೆಯ ಫಲಾನುಭವಿಗಳ ಪೈಕಿ ಕೆಲವರು ಮೃತಪಟ್ಟಿದ್ದರೂ ಅವರ ಬ್ಯಾಂಕ್ ಖಾತೆಗಳಿಗೆ ಯೋಜನೆಯ ಹಣ ಜಮೆಯಾಗುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ.
ಇಂತಹ ಲೋಪಗಳು ಸರ್ಕಾರದ ಹಣದ ದುರುಪಯೋಗಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ, ಫಲಾನುಭವಿಗಳ ಮಾಹಿತಿಯನ್ನು ಕಾಲಕಾಲಕ್ಕೆ ಪರಿಶೀಲಿಸಿ, ಅನರ್ಹರನ್ನು ಪಟ್ಟಿಯಿಂದ ಕೈಬಿಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಬೇಕು. ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಜವಾಬ್ದಾರಿ ಹಾಗೂ ಇಲಾಖೆಗಳ ನಡುವಿನ ಸಮನ್ವಯತೆ ಅತ್ಯಂತ ಅಗತ್ಯವಾಗಿದೆ.ಈ ಮೂರು ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಮಾತ್ರ ಯೋಜನೆಗಳ ಉದ್ದೇಶ ಸಾರ್ಥಕವಾಗಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ವಿವಿಧ ಗ್ಯಾರಂಟಿ ಯೋಜನೆಗಳ ಪ್ರಗತಿ, ಫಲಾನುಭವಿಗಳ ನೋಂದಣಿ, ಅರ್ಜಿಗಳ ವಿಲೇವಾರಿ, ಬಾಕಿ ಇರುವ ಪ್ರಕರಣಗಳು ಹಾಗೂ ಯೋಜನೆಗಳ ಅನುಷ್ಠಾನದಲ್ಲಿನ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚೆ ನಡೆಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಪ್ರಗತಿ ವರದಿ ಮಂಡಿಸಿ, ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ರ್ನಿಲಕ್ಷ$್ಯಕ್ಕೆ ಅವಕಾಶ ನೀಡದೆ, ಫಲಾನುಭವಿಗಳ ಮಾಹಿತಿಯನ್ನು ನಿಯಮಿತವಾಗಿ ಪರಿಷ್ಕರಿಸುವುದು, ಇಲಾಖೆಗಳ ನಡುವೆ ಸಮನ್ವಯ ಸಾಧಿಸುವುದು ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು.
ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ವಿದ್ಯಾವಸದ್, ಬೆಸ್ಕಾಂ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಉದ್ಯೋಗ ವಿನಿಮಯ ಕಚೇರಿ, ತಾಲೂಕು ಪಂಚಾಯಿತಿ ಸಿಬ್ಬಂದಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.