ಪ್ರಕರಣಕ್ಕೆ ಸಂಬಂಧಿಸಿದಂತೆ ಗಫಾರ್ ಖುರೇಷಿ (45) ಎಂಬುವರನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ. ಆರೋಪಿ ವಿರುದ್ಧ ಕರ್ನಾಟಕ ಗೋಹತ್ಯೆ ತಡೆಗಟ್ಟುವಿಕೆ ಮತ್ತು ಜಾನುವಾರು ಸಂರಣೆ ಕಾಯ್ದೆ 2021ರ ಕಲಂ 12 ಹಾಗೂ ಬಿಎನ್ಎಸ್ನ 271, 272 ಮತ್ತು 325 ಕಲಂಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾನೂನು ಕೈಗೆತ್ತಿಕೊಳ್ಳದಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.