ಪ್ರಸಕ್ತ ವರ್ಷದ ಏಪ್ರಿಲ್‌ನಲ್ಲಿ 924 ಔಷಧ ಮಾದರಿಗಳ ನಿಗದಿತ ಬ್ಯಾಚ್‌ಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ. ಅವುಗಳಲ್ಲಿ 26 ಮಾದರಿಗಳು ಪ್ರಮಾಣಿತ ಗುಣಮಟ್ಟ ಹೊಂದಿರಲಿಲ್ಲ. ಕಳೆದ ವರ್ಷ 16,337 ಔಷಧ ಮಾದರಿಗಳನ್ನು ವಿಶ್ಲೇಷಿಸಲಾಗಿದ್ದು, 473 ಔಷಧಗಳ ನಿಗದಿತ ಬ್ಯಾಚ್‌ಗಳು ಪ್ರಮಾಣಿತ ಗುಣಮಟ್ಟ ಹೊಂದಿರಲಿಲ್ಲ. ಪರವಾನಗಿ ರದ್ದತಿ ಸೇರಿ ವಿವಿಧ ಕ್ರಮ ಕೈಗೊಳ್ಳಲಾಗಿದೆ. ನಿಯಮಬಾಹಿರವಾಗಿ ಮಾದಕ ಔಷಧಗಳ ಮಾರಾಟಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ 1,309 ಔಷಧ ಮಳಿಗೆಗಳನ್ನು ಪರಿಶೀಲಿಸಿ, 457 ಔಷಧ ಮಳಿಗೆಗಳ ಪರವಾನಗಿ ರದ್ದು ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.