ವಿಷಯ ತಿಳಿದು ಸ್ಥಳಕ್ಕೆ ಪಿಎಸ್ಐ ಮಹೇಂದ್ರಕುಮಾರ್ ಭೇಟಿ ನೀಡಿ, ವಿದ್ಯಾರ್ಥಿ ಹಾಗೂ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ ನಂತರ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಚರ್ಚಿಸಿ, ಸೋಮವಾರದಿಂದ ಬನ್ನಳ್ಳಿ ಗ್ರಾಮಕ್ಕೆ ಹೆಚ್ಚುವರಿ ಬಸ್ ಸಂಚಾರ ಕಲ್ಪಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಅಧಿಕಾರಿಗಳ ಭರವಸೆಯ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂತೆಗೆದುಕೊಂಡು ರಸ್ತೆ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.