ದಸರಾ ಹಬ್ಬದ ಅಂಗವಾಗಿ ವಿಶೇಷ ರೈಲುಗಳ ಸಂಚಾರ

ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ನೈರುತ್ಯ ರೈಲ್ವೆ ಕ್ರಮ
Operation of special trains for the Dasara festival
ದಸರಾ ಹಬ್ಬದ ಅಂಗವಾಗಿ ವಿಶೇಷ ರೈಲುಗಳ ಸಂಚಾರCE05_Preeti
Published on: 

ಬೆಂಗಳೂರು : ಮೈಸೂರು ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈರುತ್ಯ ರೈಲ್ವೆಯು ವಿವಿಧ ನಿಲ್ದಾಣಗಳ ನಡುವೆ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಅ.19, 20, 21ರಂದು ಕೆಎಸ್‌ಆರ್ ಬೆಂಗಳೂರು ಅಶೋಕಪುರಂ (06285/06286) ನಡುವೆ 3 ಟ್ರಿಪ್ ವಿಶೇಷ ರೈಲು ಸಂಚರಿಸಲಿದೆ. ಎಂಟು ಮೆಮು ಬೋಗಿಗಳ ಈ ರೈಲುಗಳು, ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಎಲಿಯೂರು, ಬ್ಯಾಡರಹಳ್ಳಿ, ಪಾಂಡವಪುರ, ಶ್ರೀರಂಗಪಟ್ಟಣ, ನಾಗನಹಳ್ಳಿ, ಮೈಸೂರು ಹಾಗೂ ಚಾಮರಾಜಪುರಂ ನಿಲ್ದಾಣಗಳಲ್ಲಿ ನಿಲ್ಲಲಿವೆ.

ಅ.16 ರಿಂದ 21ರವರೆಗೆ ಬೆಂಗಳೂರು ಮೈಸೂರು ನಡುವೆ (06287/06288, 06297/06298) ವಿಶೇಷ ರೈಲುಗಳು ಸಂಚರಿಸಲಿವೆ. ಅ.21ರಂದು ಮೈಸೂರು ಚಾಮರಾಜನಗರ ನಡುವೆ (06293/06294, 06289/06290) ವಿಶೇಷ ರೈಲುಗಳು ಸಂಚಾರಿಸಲಿವೆ.

19 ಬೋಗಿಗಳಿರುವ ಈ ವಿಶೇಷ ರೈಲುಗಳು ಎರಡೂ ಮಾರ್ಗಗಳಲ್ಲಿ ಚಾಮರಾಜಪುರಂ, ಅಶೋಕಪುರಂ, ಕಡಕೊಳ, ತಾಂಡವಪುರ ಹಾಲ್ಟ್, ಸುಜಾತಾಪುರ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿಹುಂಡಿ ಹಾಲ್ಟ್, ನರಸಾಂಬುಧಿ ಹಾಲ್ಟ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ ಗಂಗವಾಡಿ ಹಾಲ್ಟ್ ನಿಲ್ದಾಣಗಳಲ್ಲಿ ನಿಲ್ಲಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net