ಕಲಬುರಗಿ ಕನ್ನಡ ಭವನದಲ್ಲಿ ಅಂಗನವಾಡಿ ನೌಕರರ ಸಂಘ ಮಂಗಳವಾರ ಆಯೋಜಿಸಿದ್ದ ವಿಭಾಗ ಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಸುನಂದ ಮಾತನಾಡಿದರು. ಜಿ. ಕಮಲಾ, ಶಾಂತಘಂಟೆ, ಗೌರಮ್ಮ ಪಾಟೀಲ್, ಶ್ರೀದೇವಿ ಚುಡೆ, ಹೆಚ್.ಪದ್ಮ, ಅನಿತಾ ಹಿರೇಮಠ್ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಅಂಗನವಾಡಿ ನೌಕರರ ವಿಭಾಗ ಮಟ್ಟದ ಕಾರ್ಯಾಗಾರ
ಕಲಬುರಗಿ: ಅಂಗನವಾಡಿ ನೌಕರರ ಸಮಸ್ಯೆಗಳ ಪರಿಹಾರ ಹಾಗೂ ಹಕ್ಕುಗಳ ರಕ್ಷಣೆಗಾಗಿ ಸಂಘಟನೆ ಬಲಿಷ್ಠವಾಗಬೇಕು. ಈ ನಿಟ್ಟಿನಲ್ಲಿ ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಸುನಂದ ಹೇಳಿದರು.
ನಗರದ ಕನ್ನಡ ಭವನದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ವತಿಯಿಂದ ಮಂಗಳವಾರ ಆಯೋಜಿಸಿದ್ದ ರಾಜ್ಯಮಟ್ಟದ ವಿಭಾಗವಾರು ಸಂಘಟನಾ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಅಂಗನವಾಡಿ ನೌಕರರು ಎದುರಿಸುತ್ತಿರುವ ವಿವಿಧ ಸಮಸ್ಯೆ ಪರಿಹಾರಕ್ಕಾಗಿ ಸಂಘಟನೆ ಇನ್ನಷ್ಟು ಸದೃಢಗೊಳ್ಳಬೇಕು. ಸರ್ಕಾರದ ಮಟ್ಟದಲ್ಲಿ ನೌಕರರ ಬೇಡಿಕೆ ಈಡೇರಿಸಿಕೊಳ್ಳಲು ಸಂಘಟಿತ ಹೋರಾಟವೇ ಪರಿಣಾಮಕಾರಿ ಮಾರ್ಗ ಎಂದು ಅಭಿಪ್ರಾಯಪಟ್ಟರು.
ಸಂಘಟನೆಯ ರಾಜ್ಯ ಖಜಾಂಚಿ ಜಿ. ಕಮಲಾ, ರಾಜ್ಯ ಕಾರ್ಯಾಧ್ಯೆ ಶಾಂತ ಂಟೆ, ರಾಜ್ಯ ಉಪಾಧ್ಯಕ್ಷೆ ಗೌರಮ್ಮ ಪಾಟೀಲ್ ಹಾಗೂ ಶ್ರೀದೇವಿ ಚುಡೆ, ಹೆಚ್.ಪದ್ಮ (ರಾಯಚೂರು), ಅನಿತಾ ಹಿರೇಮಠ್ (ಯಾದಗಿರಿ) ಇತರರಿದ್ದರು.
ಕಲಬುರಗಿ, ರಾಯಚೂರು, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ 21 ತಾಲೂಕುಗಳಿಂದ ಆಗಮಿಸಿದ್ದ ಸುಮಾರು 210 ಮಂದಿ ಮಹಿಳಾ ನಾಯಕಿಯರು ಮತ್ತು ಪದಾಧಿಕಾರಿಗಳು ಕಾರ್ಯಗಾರದಲ್ಲಿ ಭಾಗವಹಿಸಿ ಸಂಘಟನೆ ಬಲವರ್ಧನೆ, ಸದಸ್ಯತ್ವ ವೃದ್ಧಿ ಹಾಗೂ ನೌಕರರ ಹಕ್ಕುಗಳ ಕುರಿತಂತೆ ಚರ್ಚಿಸಿದರು.