ಪ್ರಕೃತಿ ಆರಾಧಿಸುವ ಸಂಸ್ಕೃತಿ ನಮ್ಮದು

ಯಳಂದೂರು ಸಮೀಪದ ಚಾಮರಾಜನಗರ ತಾಲೂಕಿನ ಕುದೇರು ಗ್ರಾಮದ ಸಿ.ಸಂಗಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು. ಅರಣ್ಯ ಇಲಾಖೆಯ ಆರ್.ಮಹೇಶ್, ವಕೀಲ ಗೌಡಹಳ್ಳಿ ಮಹೇಶ್ ಇತರರು ಇದ್ದರು.
ಯಳಂದೂರು ಸಮೀಪದ ಚಾಮರಾಜನಗರ ತಾಲೂಕಿನ ಕುದೇರು ಗ್ರಾಮದ ಸಿ.ಸಂಗಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು. ಅರಣ್ಯ ಇಲಾಖೆಯ ಆರ್.ಮಹೇಶ್, ವಕೀಲ ಗೌಡಹಳ್ಳಿ ಮಹೇಶ್ ಇತರರು ಇದ್ದರು.
Published on
ಯಳಂದೂರು: ನಮ್ಮ ಸಂಸ್ಕೃತಿಯಲ್ಲಿ ಮಾತೃ-ಪಿತೃ ಹಾಗೂ ಗುರು ದೇವೋಭವ ಎಂಬ ನಂಬಿಕೆಗಳಿವೆ. ಅದರಂತೆ ವೃಕ್ಷದೇವೋಭವ ಎಂಬ ನಂಬಿಕೆಯನ್ನು ವಿದ್ಯಾರ್ಥಿಗಳು ಅನುಸರಿಸಿ ಆಚರಿಸಬೇಕು ಎಂದು ಕುದೇರು ಎಂ.ಸಂಗಶೆಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಿವಪ್ರಕಾಶ್ ಹೇಳಿದರು.

ಕುದೇರು ಗ್ರಾಮದ ಸಿ. ಸಂಗಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಅರಣ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಶೋಕನ ಕಾಲದಲ್ಲೇ ರಸ್ತೆ ಬದಿ ಗಿಡ ನೆಡುತ್ತಿದ್ದ ಸಂಸ್ಕೃತಿ ನಮ್ಮದಾಗಿದೆ. ಪರಿಸರ ಪ್ರೀತಿಸುವ, ಪೋಷಿಸುವ ಕೆಲಸ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಈಚೆಗೆ ಎಲ್ಲ ಗಿಡಮರಗಳನ್ನು ಕಡಿಯಲಾಗುತ್ತಿದೆ. ಜಗತ್ತು ಕಾಂಕ್ರಿಟೀಕರಣವಾಗುತ್ತಿದೆ. ಇದರ ಪರಿಣಾಮ ಪರಿಸರದ ಮೇಲೆ ನೇರವಾಗಿ ಆಗುತ್ತಿರುವುದರಿಂದ ಅನೇಕ ಸಮಸ್ಯೆಗಳು ಎದುರಿಸಬೇಕಾಗಿದೆ. ಹಾಗಾಗಿ ಪರಿಸರ ಜಾಗೃತಿ ಮೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ, ವಕೀಲ ಗೌಡಹಳ್ಳಿ ಮಹೇಶ್ ಮಾತನಾಡಿ, 1974ರಿಂದ ವಿಶ್ವಸಂಸ್ಥೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಪರಿಸರ ದಿನ ಆಚರಿಸಲಾಗುತ್ತಿದೆ. ಪ್ರಸ್ತುತ ವಿಶ್ವದ 143 ದೇಶಗಳಲ್ಲಿ ಪರಿಸರದಿನ ಆಚರಿಸಲಾಗುತ್ತಿದೆ ಎಂದರು.

ಈ ಶಾಲೆಯಲ್ಲಿ ಓದಿದ ವಿದ್ಯಾರ್ಥಿ ಆರ್.ಮಹೇಶ್ ಅವರು ಪರಿಸರದ ಬಗ್ಗೆ ಅಪಾರ ಕಾಳಜಿ ವಹಿಸಿದ್ದಾರೆ. ಅರಣ್ಯ ಪ್ರದೇಶದ ರಸ್ತೆಗಳಲ್ಲಿ ಪ್ಲಾಸ್ಟಿಕ್‌ನ್ನು ಶೇಖರಿಸುವುದು, ಗಿಡಗಳನ್ನು ನೆಡುವುದು, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿ ಮೂಡಿಸುವ ಕಾರ್ಯಕ್ರಮ ಸೇರಿದಂತೆ 17ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಸ್ವಂತ ಖರ್ಚಿನಲ್ಲಿ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲೂ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಗಿಡಗಳನ್ನು ನೀಡಿದ್ದಾರೆ. ಇದು ಇತರರಿಗೆ ಮಾದರಿಯಾಗಬೇಕು ಎಂದರು.

ಅರಣ್ಯ ಇಲಾಖೆ ಅಧಿಕಾರಿ ಅನಂತರಾಮು, ಸಿಬ್ಬಂದಿ ಗಿರೀಶ್, ಶಾಲೆ ಉಪಪ್ರಾಂಶುಪಾಲ ಜಿ.ತಮ್ಮಯ್ಯ ಮಾತನಾಡಿದರು. ಇದಕ್ಕೂ ಮುಂಚೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪರಿಸರ ಜಾಗೃತಿ ಜಾಥಾ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಗಿಡಗಳನ್ನು ನೀಡಲಾಯಿತು. ವಿದ್ಯಾರ್ಥಿಗಳಿಗೆ ಗಿಡ ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ಮಹದೇವಸ್ವಾಮಿ, ಸದಸ್ಯೆ ಸುಂದ್ರಮ್ಮ, ಆರ್.ಮಹೇಶ್, ಗಿರೀಶ್, ವಿನಾಯಕ, ನಂದೀಶ್, ಬಾಬು, ಸುಭಾಷ್, ರಾಮಪ್ಪ ಉಪ್ಪಾರ್, ಚಿನ್ನಸಾಮಿ, ಮಹದೇವಪ್ಪ, ಪೃಥ್ವಿರಾಜ್, ನಟರಾಜು, ರವಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net